ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವು: ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಪೋಷಕರು

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವು: ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಪೋಷಕರು
ಮೃತ ವಿದ್ಯಾರ್ಥಿನಿ ತನುಶ್ರೀ
Edited By:

Updated on: Jul 19, 2023 | 7:15 PM

ಚಿಕ್ಕಬಳ್ಳಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai) ಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ. ತನುಶ್ರೀ ಮೃತ ವಿದ್ಯಾರ್ಥಿನಿ. ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು. ಹಾಗಾಗಿ ವಿದ್ಯಾರ್ಥಿನಿಯನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಸದ್ಯ ವಿದ್ಯಾರ್ಥಿನಿ ತನುಶ್ರೀ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Kolar News: ಕೌಟುಂಬಿಕ ಕಲಹ, ಪತ್ನಿಯನ್ನು ಕೊಂದು ಎಸ್ಕೇಪ್ ಆದ ಪತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ 2ನೇ ಬಲಿ

ಚಿಕ್ಕಮಗಳೂರು: ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿ ಆಗಿದೆ. ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ಬಿದ್ದ ವೃದ್ಧೆ ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದು, ಹೇಮಾವತಿ ನದಿಯಲ್ಲಿ ವೃದ್ಧೆಯ ಶವ ಪತ್ತೆ ಆಗಿದೆ. ದಾರದಹಳ್ಳಿ ಗ್ರಾಮದ ದೇವಮ್ಮ(61) ಮೃತ ವೃದ್ಧೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಇರುವ ಹೇಮಾವತಿ ನದಿಯಲ್ಲಿ ಘಟನೆ ನಡೆದಿದೆ.

ಹೇಮಾವತಿ ನದಿಯ ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಬ್ರೀಡ್ಜ್​ಗೆ ಬೈಕ್ ಡಿಕ್ಕಿ ಮೂವರಿಗೆ ಗಾಯ

ಹಾವೇರಿ: ಬ್ರೀಡ್ಜ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾಗಿರುವಂತಹ ಘಟನೆ ಹಾವೇರಿ ಸಮೀಪದ ಕಾಗಿನೆಲೆಯ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ಮಹಾಲಿಂಗಪ್ಪ (20), ಬಸವರಾಜ್ (18), ಮಹೇಶ್ ಗೌಡ (25) ಮೃತರು. ಓರ್ವನಿಗೆ ಅತಿಯಾದ ರಕ್ತಸ್ರಾವ ಉಂಟಾಗಿದ್ದು, ಮತ್ತಿಬರು ಅಪಾಯದಿಂದ ಪಾರಾಗಿದ್ದಾರೆ. ಅತಿ ವೇಗದಲ್ಲಿದ್ದ ಬೈಕ್ ಕಂಟ್ರೋಲ್ ತಪ್ಪಿ ಬ್ರಿಡ್ಜ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೂವರು ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ‌

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.