
ಚಿಕ್ಕಬಳ್ಳಾಪುರ: ಸಿಎಂ ಆದ ಬಳಿಕ ಮೊದಲ ಬಾರಿಗೆ ಚಿಕ್ಕಬಳ್ಳಾಪುರಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಸರ್ಲಾ ಸ್ಮಾರಕ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.
ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ನಿಂದ ಈ ಖಾಸಗಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಆಸ್ಪತ್ರೆ ಉದ್ಘಾಟನೆ ಬಳಿಕ ಸರ್ ಎಂ.ವಿಶ್ವೇಶ್ವರಯ್ಯ ಸಮಾಧಿ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಸಿಎಂಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಲಿದ್ದಾರೆ.
ಸಚಿವರಿಗೆ ಪ್ರವಾಸಿ ತಾಣವಾಗುತ್ತಿರುವ ಚಾಮರಾಜನಗರ ಜಿಲ್ಲೆ
ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬ ಸಚಿವರು ಪ್ರವಾಸಿ ತಾಣಗಳಲ್ಲಿಯೇ ವಾಸ್ತವ್ಯ ಹೂಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಮೊದಲ ಬಾರಿಗೆ ಭೇಟಿ ನೀಡಿದ ವೇಳೆ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಎರಡನೇ ಭೇಟಿಯಲ್ಲಿ ಬಂಡಿಪುರದ ಜಂಗಲ್ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿ ಅರಣ್ಯ ಸಂಚಾರ ಮಾಡಿದ್ದರು. ಅರಣ್ಯ ಸಚಿವರು ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಹಾದಿಯನ್ನೇ ತುಳಿಯುತ್ತಿದ್ದಾರೆ. ಅರಣ್ಯ ಸಚಿವರಿಂದ ಕಳೆದರೆಡು ದಿನಗಳಿಂದ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ವಾಸ್ತವ್ಯ.
ಬುಧವಾರ ಸಂಜೆ ಜಂಗಲ್ ಲಾಡ್ಜ್ ನಲ್ಲಿ ವಾಸ್ತವ್ಯ ಮಾಡಿದ್ರು. ಗುರುವಾರ ಬೆಳಗ್ಗೆ ಸಫಾರಿ, ಬಳಿಕ ಬುಡಕಟ್ಟು ಜನರೊಂದಿಗೆ ಸಂವಾದ. ಗುರುವಾರ ರಾತ್ರಿ ಕೆ.ಗುಡಿ ಯಲ್ಲಿ ವಾಸ್ತವ್ಯ, ಶುಕ್ರವಾರ ಬೆಳಗ್ಗೆ ಸಫಾರಿ, ಬುಡಕಟ್ಟು ಜನರೊಂದಿಗೆ ಸಂವಾದ.
ಇದನ್ನೂ ಓದಿ: ಉಪ ರಾಷ್ಟ್ರಪತಿ ಕರ್ನಾಟಕ ಭೇಟಿ ಅಂತ್ಯ; ತಾವು ಹೇಳಿದ ಮಾತಿನಂತೆ ನಡೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ!
Published On - 8:52 am, Fri, 27 August 21