Chikkaballapur Accident: ಚಿಕ್ಕಬಳ್ಳಾಪುರ ಅಪಘಾತ: ಶಾಸಕ ಪ್ರದೀಪ್ ಈಶ್ವರ್ ಭಾವುಕ, ಮೃತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಚಿಕ್ಕಬಳ್ಳಾಪುರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮತ್ತೊಂದೆಡೆ ಘಟನೆ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಅವರು ಸಂತಾಪ ಸೂಚಿಸಿದ್ದಾರೆ. ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಒಂದಲ್ಲ, ಎರಡರಲ್ಲ ಬರೋಬ್ಬರಿ 13 ಮಂದಿ ಉಸಿರು ಚೆಲ್ಲಿದ್ದಾರೆ.
ಚಿಕ್ಕಬಳ್ಳಾಪುರ, ಅ.26: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಚಿತ್ರಾವತಿ ಬಳಿಯ ರಸ್ತೆ ಸ್ಮಶಾನದಂತಾಗಿದೆ (Chikkaballapur Accident). ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ಟಾಟಾ ಸುಮೋ ರಸ್ತೆ ಬದಿ ನಿಂತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದ್ದು 13 ಮಂದಿ ಉಸಿರು ಚೆಲ್ಲಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮತ್ತೊಂದೆಡೆ ಘಟನೆ ಸಂಬಂಧ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಸಂತಾಪ ಸೂಚಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಒಂದಲ್ಲ, ಎರಡರಲ್ಲ ಬರೋಬ್ಬರಿ 13 ಮಂದಿ ಉಸಿರು ಚೆಲ್ಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್ ರವರು ಶವಾಗಾರದ ಬಳಿ ಆಗಮಿಸಿ, ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ರು. ಇದೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿದ ಶಾಸಕ, ಮೃತರ ಕುಟುಂಸ್ಥರಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದರು. ಮುಖ್ಯಮಂತ್ರಿಗಳು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಮುಖ್ಯಮಂತ್ರಿಗಳು ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಚಿಕ್ಕಬಳ್ಳಾಪುರ: ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಸಾವಿನ ಸಂಖ್ಯೆ 12ಕ್ಕೆ ಏರಿಕೆ
ತಾಯಿ ಮೃತಪಟ್ಟ ಘಟನೆಯನ್ನು ನೆನೆದು ಭಾವುಕರಾದ ಶಾಸಕ ಪ್ರದೀಪ್ ಈಶ್ವರ್
ಟಿವಿ9 ಜೊತೆ ಮಾತನಾಡುವಾಗ ಶಾಸಕ ಪ್ರದೀಪ್ ಈಶ್ವರ್ ಭಾವುಕರಾಗಿ ಮಾತು ಹೊರಡದಂತಾಯಿತು. ಅಪಘಾತದಲ್ಲಿ ಮೃತಪಟ್ಟ ಶವಗಳನ್ನು ನೋಡಿ ಕಣ್ಣೀರು ಹಾಕಿದರು. 18 ವರ್ಷಗಳ ಹಿಂದೆ ತನ್ನ ತಾಯಿಯೂ ಶವಗಾರದ ಪ್ರೀಜರ್ ನಲ್ಲಿ ಹೀಗೆ ಮಲಗಿದ್ರು. ಆಂಧ್ರದ ಹಿಂದೂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿಯ ಶವ ಇರಿಸಲಾಗಿತ್ತು ಎಂದರು. ರಸ್ತೆ ಸುರಕ್ಷತೆ ವಿಚಾರದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳು ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಘಟನೆ ಹಿನ್ನೆಲೆ
ಟಾಟಾ ಸುಮೋ ಆಂಧ್ರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಮುಂಜಾನೆಯಾದ ಕಾರಣ ದಟ್ಟ ಮಂಜು ಆವರಿಸಿತ್ತು. ಹೀಗಾಗಿ ರಸ್ತೆ ಬದಿ ನಿಂತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಒಂದು ಮಗು ಸೇರಿದಂತೆ 13 ಮಂದಿ ಪ್ರಾಣ ಬಿಟ್ಟಿದ್ದಾರೆ. ಮೃತರೆಲ್ಲರೂ ಬೇರೆ ಬೇರೆ ಊರಿನವರು. ಗೋರಂಟ್ಲ ತಾಲೂಕಿನ ಟಾಟಾ ಸುಮೋ ಚಾಲಕ ನರಸಿಂಹಪ್ಪ ಮಾರ್ಗ ಮಧ್ಯೆ ವಿವಿಧೆಡೆ ಪ್ರಯಾಣಿಕರನ್ನ ಹತ್ತಿಸಿಕೊಂಡಿದ್ದನಂತೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:38 pm, Thu, 26 October 23