Chikkaballapur News: ವಿದೇಶಗಳಲ್ಲಿ ಆಗಿದ್ದರೆ ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕುತ್ತಿದ್ದರು; ವೀರಪ್ಪ ಮೊಯ್ಲಿ

| Updated By: Rakesh Nayak Manchi

Updated on: Jul 09, 2023 | 5:34 PM

ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ ಎಂದು ಮೊಯ್ಲಿ ಕಿಡಿ ಕಾರಿದ್ದಾರೆ.

Chikkaballapur News: ವಿದೇಶಗಳಲ್ಲಿ ಆಗಿದ್ದರೆ ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕುತ್ತಿದ್ದರು; ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Follow us on

ಚಿಕ್ಕಬಳ್ಳಾಫುರ: ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಪೂರ್ಣ ಹಾಳು ಮಾಡಲಾಗಿದೆ. ವಿದೇಶಗಳಲ್ಲಿ ಆಗಿದ್ದರೆ ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ (CN Ashwath Narayan) ಅವರನ್ನು ನೇಣುಗಂಬಕ್ಕೆ ಹಾಕುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ವಿವಿಗಳಲ್ಲಿ ಮೂಲಭೂತ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕ್ಕೆ ಆಗ್ರಹ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ ಎಂದು ಮೊಯ್ಲಿ ಕಿಡಿ ಕಾರಿದ್ದಾರೆ.

ವಿಧಾನಮಂಡಲ ಅಧಿವೇಶನ ನಂತರ ನಿಗಮ ಮಂಡಳಿಗಳ ನೇಮಕ ಆಗಲಿದೆ. ಪಕ್ಷಕ್ಕೆ ದುಡಿದ ಕಾರ್ಯಕರ್ತರು ಹಾಗೂ ಮುಖಂಡರ ನೇಮಕ ಆಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಬೀರಲಿದೆ. ರಾಜ್ಯದಲ್ಲಿ ಈ ಬಾರಿ ಇಪ್ಪತೈದಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ಮಕ್ಕಳು ಭಾಗಿ ಆರೋಪ: ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದ ಹೆಚ್​ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳನ್ನು ಬೆದರಿಸಬಹುದು. ಆದರೆ ಜನರನ್ನು ಬೆದರಿಸಲು ಸಾದ್ಯವಿಲ್ಲ. ಜನರ ಆಕ್ರೋಶ ಬಿಜೆಪಿ ವಿರುದ್ದ ಜ್ವಾಲಾಮುಖಿಯಾಗಿ ಸಿಡಿಯಲಿದೆ. ದೇಶದ ಸಂಪನ್ಮೂಲಗಳು ಕೆಲವೇ ಶ್ರೀಮಂತರ ಬಳಿ ಸೇರಿವೆ. ಬಿಜೆಪಿ ಶ್ರೀಮಂತ ಪರ ಇರೋ ಪಕ್ಷ. ಕಾಂಗ್ರೆಸ್ ಬಡವರ ಪರ ಇರೋ ಪಕ್ಷ. ಮೋದಿ ಯಾವಾಗ ಏನು ಮಹಾಕಾರ್ಯ ಮಾಡಿದ್ದಾರೆ ಹೇಳಿ? ಅವರು ದೇಶವನ್ನು ಮುನ್ನೆಡೆಸುವುದಲ್ಲ ಹಿಂದೆ ನೂಕುತ್ತಿದ್ದಾರೆ ಎಂದು ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್​​ಡಿ ಕುಮಾರಸ್ವಾಮಿ ಪೆನ್ ಡ್ರೈವ್​​ನಲ್ಲಿ ಇರುವುದು ಬಾಂಬ್ ಅಲ್ಲ ಟುಸ್ ಪಟಾಕಿ ಎಂದು ಮೊಯ್ಲಿ ವ್ಯಂಗ್ಯವಾಡಿದ್ದಾರೆ. ಕುಮಾರಸ್ವಾಮಿ ಈ ರೀತಿ ಹಲವು ಬಾರಿ ನಡೆದುಕೊಂಡಿದ್ದಾರೆ. ಅವರು ಬಿಜೆಪಿ ಜೊತೆ ಸೇರಿ ಈ ರೀತಿ ವರ್ತಿಸುತ್ತಿದ್ದಾರೆ. ಚುನಾವಣೆಯ ಸೋಲಿನ ಹತಾಷೆಯಿಂದ ಜನರ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:51 pm, Thu, 6 July 23