AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ಹೈಡ್ರಾಮದ ನಡುವೆ ಪ್ರೀಯಕರನ ಜೊತೆ ಹೋದ ಯುವತಿ

ಚಿಕ್ಕಬಳ್ಳಾಪುರದಲ್ಲಿ ಕುಟುಂಬಸ್ಥರ ವಿರೋಧದ ನಡುವೆ ಅನ್ಯ ಜಾತಿಯ ಯುವಕ ಯುವತಿ ಪರಸ್ಪರ ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದರು. ಅದರಂತೆ, ಪ್ರಕರಣವು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇದೀಗ ಯುವತಿ ಯುವಕನೊಂದಿಗೆ ಹೋಗುವುದಾಗಿ ಹೇಳಿದ ಹಿನ್ನೆಲೆ ಪೊಲೀಸರು ಆಕೆಯನ್ನು ಯುವಕನೊಂದಿಗೆ ಕಳುಹಿಸಿದ್ದಾರೆ.

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ಹೈಡ್ರಾಮದ ನಡುವೆ ಪ್ರೀಯಕರನ ಜೊತೆ ಹೋದ ಯುವತಿ
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ಹೈಡ್ರಾಮದ ನಡುವೆ ಪ್ರೀಯಕರನ ಜೊತೆ ಹೋದ ಯುವತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: Rakesh Nayak Manchi|

Updated on: Aug 06, 2023 | 9:28 PM

Share

ಚಿಕ್ಕಬಳ್ಳಾಪುರ, ಆಗಸ್ಟ್ 6: ಯುವತಿಯೊಬ್ಬಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ಚಿಕ್ಕಬಳ್ಳಾಪುರದ (Chikkaballapur) ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ತಾನು ಪ್ರಿಯಕರನೊಂದಿಗೆ ಹೋಗುವುದಾಗಿ ಯುವತಿ ಸ್ವಇಚ್ಛೆಯ ಹೇಳಿಕೆ ನೀಡಿದ ಹಿನ್ನೆಲೆ ಪೊಲೀಸರು ಆಕೆಯನ್ನು ಪ್ರಿಯಕರನೊಂದಿಗೆ ಕಳುಹಿಸಿದ್ದಾರೆ.

ಚಿಕ್ಕಬಳ್ಳಾಫುರ ನಗರದ ಮಹೇಶ್ವರಿ ಕಾಲೇಜಿನ ವಿದ್ಯಾರ್ಥಿಗಳಾದ ಭಾನುಶ್ರೀ (19) ಮತ್ತು ಮಧುಸೂದನ್ (23) ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗಲೂ ನಿರ್ಧರಿಸಿದ್ದರು. ಆದರೆ ಯುವತಿಯ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇಬ್ಬರು ಓಡಿ ಹೋಗಿ ಮದುವೆಯಾಗಿದ್ದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ಈ ಪ್ರಕರಣವು ಗುಡಿಬಂಡೆ ಪೊಲೀಸ್ ಠಾಣೆ ಮೆಟ್ಟಿಲೂ ಏರಿತ್ತು. ಭಾನುಶ್ರೀ ತಂದೆ ತನ್ನ ಮಗಳು ಕಾಣೆಯಾಗಿದ್ದಾಗಿ ದೂರು ನೀಡಿದ್ದರು. ಅದರಂತೆ ಯುವತಿ-ಯುವಕನನ್ನು ಪತ್ತೆಹಚ್ಚಿದ ಪೊಲೀಸರು, ಅವರ ಪೋಷಕರನ್ನೂ ಕರೆಸಿದ್ದಾರೆ. ಈ ವೇಳೆ ಠಾಣೆಯಲ್ಲಿ ಹೈಡ್ರಾಮ ನಡೆದ ಹಿನ್ನೆಲೆ ಪೊಲೀಸರು ಯುವತಿಯಿಂದ ಸ್ವಇಚ್ಛೆಯ ಹೇಳಿಕೆ ಪಡೆದಿದ್ದಾರೆ. ಯುವತಿಯು ಪೊಲೀಸರ ಮುಂದೆ ತಾನು ಮಧುಸೂದನ್ ಜೊತೆ ಹೋಗುವುದಾಗಿ ಹೇಳಿದ್ದಾಳೆ. ಅದರಂತೆ ಆಕೆ ಮಧುಸೂದನ್ ಜೊತೆ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ