ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸದಸ್ಯರಿಂದ ವಿಪ್ ಉಲ್ಲಂಘನೆ ಪ್ರಕರಣ; ಅರ್ಜಿ ವಜಾಗೊಳಿಸಿದ ಜಿಲ್ಲಾಧಿಕಾರಿಗಳ ನ್ಯಾಯಾಲಯ

| Updated By: ganapathi bhat

Updated on: Feb 06, 2022 | 6:48 PM

ಈ ಸಂಬಂಧ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತವಾಗಿದೆ. ಸೂಕ್ತ ವಾದಕ್ಕೆ ಅವಕಾಶ ನೀಡಿಲ್ಲವೆಂದು ಆರೋಪ ಕೇಳಿಬಂದಿದೆ. ಕಾಂಗ್ರೆಸ್​ನ 7 ಜನ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತದಾನ ಮಾಡಿದ್ದರು.

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸದಸ್ಯರಿಂದ ವಿಪ್ ಉಲ್ಲಂಘನೆ ಪ್ರಕರಣ; ಅರ್ಜಿ ವಜಾಗೊಳಿಸಿದ ಜಿಲ್ಲಾಧಿಕಾರಿಗಳ ನ್ಯಾಯಾಲಯ
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
Follow us on

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸದಸ್ಯರಿಂದ ವಿಪ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನ್ಯಾಯಾಲಯ 13 ತಿಂಗಳ ಬಳಿಕ ಅರ್ಜಿ ವಜಾ ಮಾಡಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಕಾಂಗ್ರೆಸ್‌ನ 7 ಸದಸ್ಯರು ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಅರ್ಜಿ ವಜಾ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ನ್ಯಾಯಾಲಯ ಅರ್ಜಿ ವಜಾ ಮಾಡಿ ತೀರ್ಪು ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆ, ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತವಾಗಿದೆ. ಸೂಕ್ತ ವಾದಕ್ಕೆ ಅವಕಾಶ ನೀಡಿಲ್ಲವೆಂದು ಆರೋಪ ಕೇಳಿಬಂದಿದೆ. ಕಾಂಗ್ರೆಸ್​ನ 7 ಜನ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತದಾನ ಮಾಡಿದ್ದರು.

ಯಾರು ಯಾರು ವಿಪ್ ಉಲ್ಲಂಘನೆ ಮಾಡಿದ್ರು?

ಚಿಕ್ಕಬಳ್ಳಾಪುರ ನಗರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯರಾದ ಎಸ್.ಎಂ. ರಫೀಕ್, ಅಪ್ಜಲ್, ಎನ್.ಎಸ್. ಚಂದ್ರಶೇಖರ್, ಪಿ.ಎಚ್. ಮೀನಾಕ್ಷಿ, ರತ್ನಮ್ಮ, ಶಕೀಲಾ ಬಾನು, ಸ್ವಾತಿ ಎಂಬುವವರು ಸ್ವಪಕ್ಷದ ವಿಪ್ ಅನ್ನು ಉಲ್ಲಂಘನೆ ಆರೋಪ ಎದುರಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ವಿರುದ್ದ ಕಾಂಗ್ರೆಸ್ಸಿಗರ ಅಸಮಾಧಾನ

ಜಿಲ್ಲಾಧಿಕಾರಿಗಳ ವಿರುದ್ದ ಕಾಂಗ್ರೆಸ್ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಕೆ.ಎನ್. ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಹಿರಿಯ ವಕೀಲ ನಾರಾಯಣಸ್ವಾಮಿ, ಜಿಲ್ಲಾಧಿಕಾರಿಗಳು ಸೂಕ್ತ ವಾದಕ್ಕೆ ಅವಕಾಶ ನೀಡಿಲ್ಲವೆಂದು ಆರೋಪ ಮಾಡಿದ್ದಾರೆ. ಕಾಂಗ್ರೆಸ್ಸಿನ 7 ಜನ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತದಾನ ಮಾಡಿದ್ರು. ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ನಮ್ಮ ಅರ್ಜಿ 13 ತಿಂಗಳ ನಂತರ ವಜಾ ಮಾಡಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ಆದೇಶದ ವಿರುದ್ದ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿಲಾಗುವುದು. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಸಿ.ಎಂ ಇಬ್ರಾಹಿಂ ನನ್ನ ಸ್ನೇಹಿತ; ಅವರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ: ಸಿದ್ದರಾಮಯ್ಯ

ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ನನ್ನ ಸ್ನೇಹಿತ. ಅವರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದಲ್ಲಿ ಕೆಲವರು ಸಿ.ಎಂ. ಇಬ್ರಾಹಿಂ ಜೊತೆ ಮಾತನಾಡಿದ್ದಾರೆ. ನಾನು ಕೂಡ ಅವರಿಗೆ ಕೋಪ ಕಡಿಮೆಯಾದ ಬಳಿಕ ಹೋಗಿ ಮಾತನಾಡುತ್ತೇನೆ. ನಾನು ಸಿಎಲ್‌ಪಿ ನಾಯಕ ಅನ್ನೋ ಕಾರಣಕ್ಕೆ ನನ್ನ ಮೇಲೆ ಅವರಿಗೆ ಕೋಪವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

1995 ರಲ್ಲಿ ನಾನು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಆಗಿನ ಕಾಂಗ್ರೆಸ್ ಬಗ್ಗೆ ನನಗೆ ಗೊತ್ತಿಲ್ಲ. ವೀರೇಂದ್ರ ಪಾಟೀಲ್ ಜೊತೆ ಇಬ್ರಾಹಿಂ ಒಂದ್ಸಲ ಕಾಂಗ್ರೆಸ್​ಗೆ ಹೋಗಿದ್ದ. ಆಮೇಲೆ ಜನತಾದಳಕ್ಕೆ ಬರ್ತಾನೆ. ನನಗೆ ಜನತಾದಳದ ನಂತರದಿಂದ ಅಷ್ಟೆ ಐಡಿಯಾ ಇದೆ. ಅದಕ್ಕೂ ಮುನ್ನ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ನನ್ನ ಭಾಷಣ ಕೇಳಲು ಸಿದ್ದರಾಮಯ್ಯ ಮೋಟಾರ್ ಬೈಕ್​ನಲ್ಲಿ ಬರ್ತಾ ಇದ್ದರು ಎಂಬ ಇಬ್ರಾಹಿಂ ಹೇಳಿಕೆ ವಿಚಾರವಾಗಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾನೇ ಒಂದ್ಸಲ ಹೇಳಿದ್ದೆ ಅವನಿಗೆ. ನೀನು ಟೌನ್ ಹಾಲ್​ನಲ್ಲಿ ಭಾಷಣ ಮಾಡುವಾಗ ಬಂದಿದ್ದೆ ಅಂತ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಕೈವಾಡ ಇದೆ, ಕೇಸರಿ ಶಾಲು ಹೊದೆಯುವ ಹಿಂದೆ ಆರೆಸ್ಸೆಸ್ ಕೈವಾಡವಿಲ್ಲ: ಆರ್ ಅಶೋಕ

ಇದನ್ನೂ ಓದಿ: ಸಿ.ಎಂ ಇಬ್ರಾಹಿಂ ಸ್ವಾಗತಿಸಿದ್ದ ತನ್ವೀರ್ ಸೇಠ್ ಆಪ್ತ ಅಬ್ದುಲ್ ಖಾದರ್ ಶಾಹೀದ್ ಕಾಂಗ್ರೆಸ್‌ನಿಂದ ಉಚ್ಚಾಟನೆ

Published On - 3:12 pm, Sun, 6 February 22