ಕಾಂಗ್ರೆಸ್​​ನಲ್ಲಿ ಒಕ್ಕಲಿಗರು ಮುಖ್ಯಮಂತ್ರಿಯಾಗ್ತಾರೆ: ಹೊಸ ಬಾಂಬ್ ಸಿಡಿಸಿದ ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಅವರೇ ಸಿಎಂ ಆಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಇದೀಗ ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​ನಲ್ಲಿ ಒಕ್ಕಲಿಗರು ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವರೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್​​ನಲ್ಲಿ ಒಕ್ಕಲಿಗರು ಮುಖ್ಯಮಂತ್ರಿಯಾಗ್ತಾರೆ: ಹೊಸ ಬಾಂಬ್ ಸಿಡಿಸಿದ ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣಬೈರೇಗೌಡ
Follow us
Digi Tech Desk
| Updated By: ರಮೇಶ್ ಬಿ. ಜವಳಗೇರಾ

Updated on: Apr 24, 2024 | 5:30 PM

ಚಿಕ್ಕಬಳ್ಳಾಪುರ, (ಏಪ್ರಿಲ್ 24): ಚಿಕ್ಕಬಳ್ಳಾಫುರದಲ್ಲಿ ಒಕ್ಕಲಿಗರನ್ನು (vokkaliga) ಹೊಡೆದು ಆಳಲು ಯತ್ನಿಸಿದ್ದಾರೆ. ಕಾಂಗ್ರೆಸ್​​ನಲ್ಲಿ ಒಕ್ಕಲಿಗರು ಮುಖ್ಯಮಂತ್ರಿಯಾಗ್ತಾರೆ. ಹೀಗಾಗಿ ಒಕ್ಕಲಿಗರು ಒಗ್ಗಟ್ಟಾಗಿ ಕಾಂಗ್ರೆಸ್​ಗೆ ಬೆಂಬಲಿಸುವಂತೆ ಸಚಿವ ಕೃಷ್ಣ ಬೈರೇಗೌಡ (krishna byregowda) ಮನವಿ ಮಾಡಿದರು. ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೃಷ್ಣ ಬೈರೇಗೌಡ, ಬಿಜೆಪಿಯಲ್ಲಿ ಒಕ್ಕಲಿಗ ನಾಯಕರಿಗೆ ಟಿಕೆಟ್ ಕೊಟ್ಟಿಲ್ಲ. ಕಾಂಗ್ರೆಸ್​ನಲ್ಲಿ 8 ಒಕ್ಕಲಿಗ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಭವಿಷ್ಯದಲ್ಲಿ ಒಕ್ಕಲಿಗ ನಾಯಕತ್ವ ಇರಬೇಕಂದ್ರೆ ಕಾಂಗ್ರೆಸ್ ಬೆಂಬಲಿಸಿ ಎಂದು ಕರೆ ನೀಡಿದರು.

ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಒಕ್ಕಲಿಗ ಸಂಘ

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಅವರು ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಂಘಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ಒಕ್ಕಲಿಗ ಸಮುದಾಯಕ್ಕೆ ಶೇ. 11 ಮೀಸಲಾತಿ ನೀಡಿದರು. ಕಾಲೇಜು ಕಟ್ಟಲು ಕಾಂಗ್ರೆಸ್ ಸರ್ಕಾರ ಬನಶಂಕರಿ ಯಲ್ಲಿ 9 ಎಕರೆ ಭೂಮಿ ನೀಡಿದೆ. ಈಗ ಡಿಕೆಶಿಯವರು ಒಕ್ಕಲಿಗ ಸಂಘದ ಮೆಡಿಕಲ್ ಕಾಲೇಜಿಗೆ ಕೋಟ್ಯಂತರ ಬಡ್ಡಿ ಹಣ ಮನ್ನಾ ಮಾಡಲು ಮುಂದಾಗಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ

ಒಕ್ಕಲಿಗ ಸಮಾಜದ ಮತ್ತೊಂದು ಪೀಠವನ್ನು ಜೆಡಿಎಸ್ ಸ್ಥಾಪಿಸಿತು. ರಾಜಕೀಯವಾಗಿ ಎಚ್‌.ಎನ್. ನಂಜೇಗೌಡ. ಬೈರೇಗೌಡ, ನಾಗೇಗೌಡ, ಬಚ್ಚೇಗೌಡ. ನಟ ಅಂಬರೀಶ್ ಅವರನ್ನು ಪಕ್ಷದಿಂದ ಹೊರ ಹಾಕಿದ್ದ ಜೆಡಿಎಸ್. ಬಿಜೆಪಿ ಪಕ್ಷದಿಂದ ಕೂಡ ಒಕ್ಕಲಿಗ ಸಂಘಕ್ಕೆ ಯಾವುದೇ ಕೊಡುಗೆ ಇಲ್ಲ. ಸದಾನಂದ ಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರು. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಶ್ರೀಗಂಧದ ಕಾವಲು ಒಕ್ಕಲಿಗ ಸಂಘದ ಜಾಗವನ್ನು ಬೇರೆಯವರಿಗೆ ಮಂಜೂರು ಮಾಡಿದರು ಎಂದು ಅಸಮಾಧಾನ ಹೊರಹಾಕಿದರು.

ಪ್ರೊ.ಕೃಷ್ಣೇಗೌಡ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ನಾವು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ ಅವರು, ಈಗ ನಮ್ಮ ಜನಾಂಗ ನೋವು ಅನುಭವಿಸುತ್ತಿದೆ. ಮುಂದೆಯೂ ಈ ನೋವು ಅನುಭವಿಸುವುದು ಬೇಡ. ಆಗಾಗಿ ನಮ್ಮ ಜನಾಂಗದವರಿಗೆ ಕಣ್ಣು ತೆರೆಸಬೇಕು ಎಂದು ಸುದ್ದಿಗೋಷ್ಠಿ ಮಾಡಿದ್ದೇವೆ. ಅಪ್ಪ , ಮಕ್ಕಳಿಗೆ ಸಪೋರ್ಟ್ ಮಾಡಿ ನಮ್ಮ ಜನಾಂಗ ಮೋಸ ಹೋಗಿದೆ ಎಂದು ಕಣ್ಣೀರು ಹಾಕುತ್ತಿದ್ದೇವೆ. ಅವರ ಮೊಮ್ಮಗ ಬಿಟ್ಟರೆ ಬೇರೆ ಯಾರು ಅಭ್ಯರ್ಥಿ ಇಲ್ಲವಾ? ನಾನು ಕೂಡ ಪ್ರೋಫೆಸರ್‌. ಅವರು ಮೂರೂ ಕಡೆ ಸೋಲುತ್ತಾರೆ ಎಂದು ದೇವೇಗೌಡ ಕುಟುಂಬದ ವಿರುದ್ಧ ಕಿಡಿಕಾರಿದರು.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ