ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿರೋಧಿ ಬಣ ಕಾಂಗ್ರೆಸ್​ಗೆ ಗೆಲುವು: ಸ್ವಗ್ರಾಮದಲ್ಲಿ ಮಾಜಿ ಸಚಿವ ಸುಧಾಕರ್​ಗೆ ಮುಖಭಂಗ?

ಇಂದು ನಡೆದ ಪೆರೆಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಸುಧಾಕರ್ ವಿರೋಧಿ ಬಣ ಕಾಂಗ್ರೆಸ್ ಜಯಗಳಿಸಿದ್ದು, ಮಾಜಿ ಸಚಿವ ಡಾ. ಕೆ.ಸುಧಾಕರ್​​ ಸ್ವಗ್ರಾಮದಲ್ಲೇ ತೀವ್ರ ಮುಖಭಂಗ ಅನುಭವಿಸಿದ ಪ್ರಸಂಗ ನಡೆದಿದೆ.

Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 02, 2023 | 7:33 PM

ಚಿಕ್ಕಬಳ್ಳಾಪುರ, ಆಗಸ್ಟ್​​ 02: ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವ ಅಂತಲೇ ಬಿಂಬಿಸಿಕೊಂಡಿದ್ದ ಮಾಜಿ ಸಚಿವ ಡಾ. ಕೆ.ಸುಧಾಕರ್ (K Sudhakar) ಬದಲಾದ ಕಾಲದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದು ಆಯಿತು, ಆದರೆ ಈಗ ತಮ್ಮ ಸ್ವಗ್ರಾಮದಲ್ಲೇ ತೀವ್ರ ಮುಖಭಂಗ ಅನುಭವಿಸಿದ ಪ್ರಸಂಗ ನಡೆಯಿತು.

ಸ್ವಗ್ರಾಮ ಪೆರೆಸಂದ್ರ ಪಂಚಾಯತಿಯಲ್ಲಿ ಸುಧಾಕರ್ ವಿರೋಧಿ ಬಣ ಗೆಲವು

ಇಂದು ನಡೆದ ಪೆರೆಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಸುಧಾಕರ್ ವಿರೋಧಿ ಬಣ ಕಾಂಗ್ರೆಸ್ ಬೆಂಬಲಿತ ಕೆ. ಗಂಗರತ್ನಮ್ಮ ಅಧ್ಯಕ್ಷೆಯಾಗಿ, ಬಿ. ಕೆ ವೆಂಕಟಪತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸ್ವತಃ ಡಾ.ಕೆ. ಸುಧಾಕರ್ ಚಿಕ್ಕಪ್ಪ ಪಿ ಎನ್ ರವೀಂದ್ರರೆಡ್ಡಿ ಸುಧಾಕರ್ ಗೆ ವಿರೋಧವಾಗಿ ಬಣ ರೆಡಿಮಾಡಿದ್ದು, ಅವರೆ ಗೆಲುವು ಸಾಧಿಸಿದ್ದಾರೆ. ಇನ್ನೂ ಚುನಾವಣೆ ಪ್ರಯುಕ್ತ ಸ್ವಗ್ರಾಮ ಪೆರೆಸಂದ್ರದ ಮನೆಯಲ್ಲೇ ಬೀಡುಬಿಟ್ಟಿದ್ದ ಮಾಜಿ ಸಚಿವ ಡಾ ಕೆ ಸುಧಾಕರ್ ತಮ್ಮ ಬೆಂಬಲಿಗರ ಸೋಲಿನ ನಂತರ ಮುಖಭಂಗ ಅನುಭವಿಸುವಂತಾಯಿತು.

ಇದನ್ನೂ ಓದಿ: ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂ. ನೀಡಿ: ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ದ ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹಾಗೂ ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್, ಮಂತ್ರಿಯಾಗಿ ಮುಂದುವರೆಯುವುದಕ್ಕೆ ಜಿಲ್ಲೆಯ ರೈತರ ಸ್ವಾಭಿಮಾನ ಅಡ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದ್ದಾರೆ.

ಕೊಮುಲ್ ವಿಭಜನೆಯಾಗಿ ಚಿಮುಲ್ ಆಗುವುದರ ಮೂಲಕ ಹಾಲು ಉತ್ಪಾದಕ ರೈತರಿಗೆ ಅನುಕೂಲವಾಗಿತ್ತು. ಕಳೆದ ಒಂದು ವರ್ಷದ ಹಿಂದೆಯ ಕೋಲಾರ ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಪ್ರತ್ಯೇಕಗೋಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತವನ್ನು ಮಾಡಲಾಗಿತ್ತು. ಕಳೆದ ಒಂದು ವರ್ಷದಿಂದ ಆಡಳಿತ ಅಧಿಕಾರಿಯೂ ಇದ್ದರು. ಆದರೆ ಕಾಂಗ್ರೆಸ್​ ಸರ್ಕಾರ ಬರುತ್ತಿದ್ದಂತೆ ಮತ್ತೆ ಎರಡು ಸಂಘಗಳನ್ನು ಒಂದುಗೂಡಿಸಲಾಗಿದೆ ಎಂದರು.

ಇದನ್ನೂ ಓದಿ: ಆಹ್ವಾನ ಪತ್ರಿಕೆಯಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಮಿಸ್ಸಿಂಗ್: ಇಬ್ಬರು ಅಧಿಕಾರಿಗಳು ಸಸ್ಪೆಂಡ್, ಸಿಎಂ ಮೊರೆ ಹೋದ ಬಿಜೆಪಿ ಶಾಸಕ

ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸ್ವಾಭಿಮಾನ ಕಾಪಾಡಬೇಕಿತ್ತು

ಸಚಿವ ಡಾ.ಎಂ.ಸಿ.ಸುಧಾಕರ್​ಗೆ ನೈತಿಕತೆಯಿದ್ದರೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಚೆ ಬರಬೇಕಿತ್ತು. ಕೊಚಿಮುಲ್ ವಿಭಜನೆಯನ್ನು ಮತ್ತೆ ಒಗ್ಗೂಡಿಸಿ ಜಿಲ್ಲೆಯ ರೈತರಿಗೆ ವಂಚನೆ ಮಾಡಲಾಗಿದೆ. ರಾಜ್ಯ ಸರ್ಕಾರದ ವಂಚನೆ ಖಂಡಿಸಿ ಬೆಂಗಳೂರು ಚಲೋ ಪಾದಯಾತ್ರೆ ಮಾಡಲಾಗುವುದು. ಬಾಗೇಪಲ್ಲಿಯ ಗಡಿದಂನಿಂದ ವಿಧಾನಸೌಧದ ವರೆಗೂ ಪಾದಯಾತ್ರೆ ಮಾಡಲಾಗುವುದು ಅದಕ್ಕೆ ಸಕಲ ಸಿದ್ದತೆ ಮಾಡಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 pm, Wed, 2 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!