ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಹೊರವಲಯದಲ್ಲಿರುವ ಹಳ್ಳಿಯಲ್ಲಿ ಇರುವ ಆಂಜನೇಯಸ್ವಾಮಿ ದೇಗುಲದಲ್ಲಿ 500 ಕ್ಕೂ ಹೆಚ್ಚು ಮಹಿಳೆಯರನ್ನು ಒಂದೆಡೆ ಸೇರಿಸಿ ಯಾತ್ರೆ ನಡೆಸಲಾಗಿದೆ.ಚಿಂತಾಮಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾರಾಯಣರೆಡ್ಡಿಯಿಂದ ಘಟನೆ ನಡೆದಿದೆ.

ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ
ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ
Edited By:

Updated on: Jan 10, 2022 | 6:13 PM

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ. ಆರೋಗ್ಯ ಸಚಿವ ಸುಧಾಕರ್ ಬಾಮೈದ ಸತ್ಯನಾರಾಯಣರೆಡ್ಡಿಯಿಂದ ಓಂಶಕ್ತಿ ಯಾತ್ರೆ ಆಯೋಜನೆ ಮಾಡಲಾಗಿದೆ. 500 ಕ್ಕೂ ಹೆಚ್ಚು ಮಹಿಳೆಯರನ್ನು ಒಂದೆಡೆ ಸೇರಿಸಿ ಯಾತ್ರೆ ನಡೆಸಲಾಗಿದೆ. 8 ಬಸ್‌ಗಳಲ್ಲಿ ಐನೂರಕ್ಕೂ ಹೆಚ್ಚು ಮಹಿಳೆಯರ ಪ್ರಯಾಣ ಮಾಡಲಾಗಿದೆ. ಯಾತ್ರೆಗೆ ಮುನ್ನ ಆಂಜನೇಯ ದೇವಾಲಯದಲ್ಲಿ ಜಮಾವಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಹೊರವಲಯದಲ್ಲಿರುವ ಹಳ್ಳಿಯಲ್ಲಿ ಇರುವ ಆಂಜನೇಯಸ್ವಾಮಿ ದೇಗುಲದಲ್ಲಿ 500 ಕ್ಕೂ ಹೆಚ್ಚು ಮಹಿಳೆಯರನ್ನು ಒಂದೆಡೆ ಸೇರಿಸಿ ಯಾತ್ರೆ ನಡೆಸಲಾಗಿದೆ.ಚಿಂತಾಮಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾರಾಯಣರೆಡ್ಡಿಯಿಂದ ಘಟನೆ ನಡೆದಿದೆ.

ಶಾಸಕ ರೇಣುಕಾಚಾರ್ಯ ಹೋರಿ ಹಬ್ಬದಲ್ಲಿ ಪಾಲ್ಗೊಂಡ ಪ್ರಕರಣ: ಆಯೋಜಕರ ಮೇಲೆ ಕೇಸ್ ದಾಖಲಿಸುವುದಾಗಿ ಹೇಳಿಕೆ
ಶಾಸಕ ರೇಣುಕಾಚಾರ್ಯ ಹೋರಿ ಹಬ್ಬದಲ್ಲಿ ಪಾಲ್ಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆಯೋಜಕರ ಮೇಲೆ ಪ್ರಕರಣ ದಾಖಲಿಸುತ್ತೇವೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿಕೆ ನೀಡಿದ್ದಾರೆ. ಹೊನ್ನಾಳಿ ತಾಲೂಕಿನ ಬಲಮುರಿಯಲ್ಲಿ ನಡೆದಿದ್ದ ಸ್ಪರ್ಧೆಗೆ ಸಂಬಂಧಿಸಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾದ ಎಂಪಿ ರೇಣುಕಾಚಾರ್ಯ; ಬಳಿಕ ಕ್ಷಮೆಯಾಚನೆ

ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’