ಕೋಲಾರ ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೋಲಾರ ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

TV9kannada Web Team

| Edited By: preethi shettigar

Oct 20, 2021 | 1:41 PM

ಚಿಕ್ಕಬಳ್ಳಾಪುರ: ಜಿಲ್ಲಾ ಸಹಕಾರ ಬ್ಯಾಂಕ್​ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್​ನಲ್ಲಿ ಅಧ್ಯಕ್ಷ ಗೋಪಾಲಗೌಡ ನಾಮಕಾವಸ್ತೆ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ನಲ್ಲಿ ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಬ್ಯಾಂಕ್​ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡನಹಳ್ಳಿ ಗ್ರಾಮದಲ್ಲಿ ಸ್ಥಳಿಯ ವಿಎಸ್​ಎಸ್​ಎನ್​ ಸಂಸ್ಥೆಯಿಂದ ರೈತರಿಗೆ ಸಾಲ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿ ವಿಭಜನೆಗೆ ಶಾಸಕ ರಮೇಶ ಕುಮಾರ್, ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಸೇರಿದಂತೆ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಯಾರು ಎಷ್ಟೇ ತಡೆದರು ಎರಡು ಸಂಸ್ಥೆಗಳನ್ನು ವಿಭಜನೆ ಮಾಡಿಯೇ ಸಿದ್ಧ. ಇನ್ನೂ ಸಹಕಾರ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳು ತುಂಬಿದ್ದು, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್​ಗೆ ಮನವಿ ಮಾಡಿರುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವರದಿ: ಭೀಮಪ್ಪ ಪಾಟೀಲ್

ಇದನ್ನೂ ಓದಿ: ಗಡ್ಡ ಬಿಟ್ಟವರಿಗೆ ತಿಳಿಹಾಸ್ಯದೊಂದಿಗೆ ಶುಭ ಕೋರಿದ ಡಾ.ಸುಧಾಕರ್​; ವೈರಲ್​ ಆದ ಕೆಲವೇ ಕ್ಷಣಗಳಲ್ಲಿ ಪೋಸ್ಟ್​ ಡಿಲೀಟ್​!

ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​

Follow us on

Related Stories

Most Read Stories

Click on your DTH Provider to Add TV9 Kannada