ಮಾಂಡೌಸ್ ಚಂಡಮಾರುತ ಎಫೆಕ್ಟ್: ಡಿ.12ರಂದು ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಾಂಡೌಸ್ ಚಂಡಮಾರುತದಿಂದ ನಿರಂತರ ತುಂತುರು ಮಳೆ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಚಿಕ್ಕಬಳ್ಳಾಫುರ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮಾಂಡಸ್ ಚಂಡಮಾರುತದ ರೂಪ ತಳೆದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು (Tamil Nadu), ಆಂಧ್ರ ಪ್ರದೇಶದಲ್ಲಿ (Andhra Pradesh) ಭಾರೀ ಮಳೆಯ (Heavy Rainfall) ಎಚ್ಚರಿಕೆ ನೀಡಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಈ ಮಳೆ ಇನ್ನೂ 3 ದಿನಗಳ ಕಾಲ ಮುಂದುವರೆಯಲಿದೆ. ಈ ಸಂಬಂಧ ನಾಳೆ (ಡಿ.12) ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ
ಕೋಲಾರ: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಹಾಗೂ ಶೀತ ಗಾಳಿ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಹಿತ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.
ಹಾಗೇ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮೀಪ ಸುತ್ತಾಡದಂತೆ ಸೂಚನೆ ನೀಡಿದ್ದಾರೆ. ಇನ್ನೂ ಪಾಠಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ.
ರಾಜ್ಯಾದ್ಯಂತ ವಿಕೇಂಡ್ಗೆ ಮಾರಕವಾದ ತುಂತುರು ಮಳೆ
ಕಳೆದ ಅರ್ಧಗಂಟೆಯಿಂದ ಬಿಟ್ಟು ಬಿಡದೆ ಜಿಟಿ ಜಟಿ ಮಳೆ
ಉತ್ತರ ಕನ್ನಡ: ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಜೋಯಿಡಾ, ದಾಂಡೇಲಿ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಾದ್ಯಂತ ಇನ್ನು 3 ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಜಿಟಿ ಜಿಟಿ ಮಳೆಗೆ ಬೇಸತ್ತು ಹೋದ ಚಾಮರಾಜನಗರ ಮಂದಿ
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ನಗರದ ಅಂಬೇಡ್ಕರ್ ಕ್ರೀಡಾಂಗಣ ಕೆಸರುಮಯವಾಗಿದೆ. ಹಲವೆಡೆ ಮೋಡಕವಿದ ವಾತಾವರಣವಿದ್ದು, ಒಂದೆಡೆ ಚಳಿ, ಇನ್ನೊಂದೆಡೆ ತುಂತುರು ಮಳೆಯಾಗುತ್ತಿದೆ.
ಮೋಡ ಕವಿದ ವಾತವರಣ
ಯಾದಗಿರಿ: ಬಿಸಿಲು ಜಿಲ್ಲೆ ಯಾದಗಿರಿ ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ಮೋಡ ಕವಿದ ವಾತವರಣವಿದೆ. ಆಗಾಗಾ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:08 pm, Sun, 11 December 22