ಹಳೇ ದ್ವೇಷ; ಚಿಂತಾಮಣಿ ನಗರಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ನಗರಸಭಾ ಸದಸ್ಯರ ವೈಶಮ್ಯೆಕ್ಕೆ ಸುಪಾರಿ ಕೊಲೆಗೆ ಯತ್ನಿಸಿದಂತೆ ಇದ್ದು, ಮುರಳಿ ಅವರ ತಲೆ, ಕೈ, ಕುತ್ತಿಗೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಜಿ.ಎಫ್​ ಮೂಲದ ರೌಡಿಶೀಟರ್​ಗಳಿಂದ ಕೃತ್ಯದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಳೇ ದ್ವೇಷ; ಚಿಂತಾಮಣಿ ನಗರಸಭೆ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ
ಚಿಂತಾಮಣಿ ನಗರಸಭೆ ಸದಸ್ಯನ ಮೇಲೆ ಹಲ್ಲೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 9:40 PM

ಚಿಕ್ಕಬಳ್ಳಾಪುರ, ಅ.13: ಹಳೇ ದ್ವೇಷ ಹಿನ್ನೆಲೆ ಚಿಂತಾಮಣಿ ನಗರಸಭೆ ಸದಸ್ಯ(Municipal Council Member) ಮುರಳಿ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ(Chikkaballapura) ಜಿಲ್ಲೆಯ ಚಿಂತಾಮಣಿಯ ಗಜಾನನ ವೃತ್ತದಲ್ಲಿ ನಡೆದಿದೆ. ನಗರಸಭೆಯ 26ನೇ ವಾರ್ಡ್​ ಸದಸ್ಯ ಆಗಿರುವ ಮುರಳಿ ಅವರು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಮುಗಿಸಿ ನಡೆದುಕೊಂಡು ಹೋಗುತ್ತಿದ್ದಾಗ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಕೂಡಲೇ ಮುರಳಿಯನ್ನು ಕೋಲಾರದ R.L ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಚಿಂತಾಮಣಿ ತಾಲೂಕಾಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದಾರೆ.

ಕೆ.ಜಿ.ಎಫ್​ ಮೂಲದ ರೌಡಿಶೀಟರ್ ಗಳಿಂದ ಕೃತ್ಯದ ಶಂಕೆ

ಇನ್ನು ನಗರಸಭಾ ಸದಸ್ಯರ ವೈಶಮ್ಯೆಕ್ಕೆ ಸುಪಾರಿ ಕೊಲೆಗೆ ಯತ್ನಿಸಿದಂತೆ ಇದ್ದು, ಮುರಳಿ ಅವರ ತಲೆ, ಕೈ, ಕುತ್ತಿಗೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಜಿ.ಎಫ್​ ಮೂಲದ ರೌಡಿಶೀಟರ್​ಗಳಿಂದ ಕೃತ್ಯದ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು; ಶಾಲಾ ಶಿಕ್ಷಕಿಯೊಂದಿಗೆ ಹುಟ್ಟಹಬ್ಬ ಆಚರಿಸಿದಕ್ಕೆ ಯುವಕನ ಮೇಲೆ ಮೂವರಿಂದ ಹಲ್ಲೆ, ಎಫ್​ಐಆರ್​ ದಾಖಲು

ಅಟ್ಯಾಕ್ ಮಾಡುವ ಬಗ್ಗೆ ಮುರಳಿಗೆ ಮೊದಲೆ ಸುಳಿವು

ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಅಟ್ಯಾಕ್​ ಮಾಡುವ ಬಗ್ಗೆ ಮುರುಳಿಗೆ ಮೊದಲೆ ಸುಳಿವು ಸಿಕ್ಕಿತ್ತು. ಹೌದು, ಕಳೆದ ಒಂದು ವಾರದಿಂದ ತನ್ನನ್ನು ಫಾಲೋ ಮಾಡುತ್ತಿರುವವರ ಬಗ್ಗೆ ಗಾಯಾಳು ಮುರುಳಿ ಅವರು ಮೌಖಿಕವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಆದರೆ, ಮುರಳಿ ಮಾಹಿತಿಯನ್ನು ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಚಿಂತಾಮಣಿ ನಗರಠಾಣೆ ಪೊಲೀಸರ ವಿರುದ್ದ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು