ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮಂಚೇನಹಳ್ಳಿ ಬಂದ್; ರಸ್ತೆಯಲ್ಲೇ ಅಡುಗೆ, ಸಚಿವ ಸುಧಾಕರ್ ವಿರುದ್ಧ ಆಕ್ರೋಶ

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮಂಚೇನಹಳ್ಳಿ ಬಂದ್; ರಸ್ತೆಯಲ್ಲೇ ಅಡುಗೆ, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಮಂಚೇನಹಳ್ಳಿ ಬಂದ್; ರಸ್ತೆಯಲ್ಲೇ ಅಡುಗೆ, ಸಚಿವ ಸುಧಾಕರ್ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 234ರ ರಸ್ತೆ ದುರಸ್ತಿಗೆ ಆಗ್ರಹಿಸಿ ಮಂಚೇನಹಳ್ಳಿ ಬಂದ್ ನಡೆದಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯಲ್ಲಿಯಲ್ಲಿ ಹೆದ್ದಾರಿ ಬಂದ್ ಮಾಡಿ ಸ್ಥಳೀಯರು ಧರಣಿ ನಡೆಸಿದ್ದಾರೆ. ಧರಣಿ ಸ್ಥಳದಲ್ಲಿಯೇ ಅಡುಗೆ ಮಾಡಿ, ಸಚಿವ ಡಾ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ರಸ್ತೆ ಹಾಳಾಗಿದ್ದರೂ ದುರಸ್ತಿಗೊಳಿಸಿಲ್ಲ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿ ಮಂಚೇನಹಳ್ಳಿಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಧರಣಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ನಡುವಣ ಈ ಹೆದ್ದಾರಿ ರಸ್ತೆ ಕೊಳ್ಳದಂತೆ ಆಗಿದೆ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

demanding national highway 234 repair localities at manchenahalli sit protest against health minister dr k sudhakar

ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ನಡುವಣ ಈ ಹೆದ್ದಾರಿ ರಸ್ತೆ ಕೊಳ್ಳದಂತೆ ಆಗಿದೆ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ

(demanding national highway 234 repair localities at manchenahalli sit protest against health minister dr k sudhakar)

Click on your DTH Provider to Add TV9 Kannada