AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಜಿಲ್ಲೆಯ ನೂರಾರು ಹಳ್ಳಿಗಳಲ್ಲಿ ಕುಡಿಯುವ ನೀರು ಅಶುದ್ಧವಾಗಿದ್ದು, ಹೆಚ್ಚಿನ ಪ್ಲೋರೈಡ್ ಮತ್ತು ನೈಟ್ರೇಟ್ ಅಂಶಗಳು ಪತ್ತೆಯಾಗಿವೆ. ಇದು ಹಲ್ಲು, ಮೂಳೆ, ಕಿಡ್ನಿ ಮತ್ತು ಯಕೃತ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಜಿಲ್ಲಾಡಳಿತವು 1,175 ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಅಳವಡಿಸಿದ್ದು, ಕಲುಷಿತ ನೀರನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆರೋಗ್ಯ ರಕ್ಷಣೆಗಾಗಿ ಶುದ್ಧ ನೀರು ಸೇವಿಸಿ ಮತ್ತು ಕ್ಯಾಲ್ಸಿಯಂ, ವಿಟಮಿನ್ ಸಿ ಯುಕ್ತ ಆಹಾರ ಸೇವಿಸಲು ಸಲಹೆ ನೀಡಲಾಗಿದೆ.

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು
ನೀರಿನಲ್ಲಿ ವಿಷ ಅಂಶಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 26, 2026 | 9:58 AM

Share

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ, ಮೂಳೆ ಸವೆತ, ಅತಿಯಾದ ಸುಸ್ತು ಮತ್ತು ಎದೆಯುಸಿರು ಸಮಸ್ಯೆಯಾಗಿದೆ. ಕಿಡ್ನಿ (ಮೂತ್ರಪಿಂಡ) ಮತ್ತು ಲಿವರ್ (ಯಕೃತ್ತು) ಸಮಸ್ಯೆಗಳು ಹಾಗೂ ಬಹು ಅಂಗಾಂಗ ವೈಫಲ್ಯದ ಸಾಧ್ಯತೆ ಎಂದು ಹೇಳಿದ್ದಾರೆ.

ಕೇವಲ ನೀರಲ್ಲದೆ ತರಕಾರಿಗಳ ಮೂಲಕವೂ ಪ್ಲೋರೈಡ್ ಸೇರುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಯೂರಿನ್ ಪರೀಕ್ಷೆ ನಡೆಸಲಾಗುತ್ತಿದೆ. ಟಿವಿ9 ಗೆ ಮಾಹಿತಿ ನೀಡಿದ ಜಿ.ಪಂ. ಸಿ.ಇ.ಓ ಡಾ. ನವೀನ್ ವೈ ಭಟ್, ಅಶುದ್ಧ ನೀರನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ್ದಾರೆ. ಒಟ್ಟು 1,274 ಹಳ್ಳಿಗಳ ಪೈಕಿ 1,175 ಗ್ರಾಮಗಳಲ್ಲಿ (ಶೇ. 92ರಷ್ಟು) ಘಟಕಗಳನ್ನು ಸ್ಥಾಪಿಸಲಾಗಿದೆ. ಜನರ ಅನುಕೂಲಕ್ಕಾಗಿ ಪ್ರತಿ ಎರಡು ಕಿಲೋಮೀಟರ್‌ಗೆ ಒಂದರಂತೆ ಶುದ್ಧ ನೀರಿನ ಘಟಕ ಅಳವಡಿಸಲಾಗಿದೆ. ಜಿಲ್ಲೆಯ 10 ಗ್ರಾಮಗಳಲ್ಲಿ (ಚಿಕ್ಕಬಳ್ಳಾಪುರ-3, ಗೌರಿಬಿದನೂರು-5, ಶಿಡ್ಲಘಟ್ಟ-2) ನೀರು ಅತ್ಯಂತ ಅಶುದ್ಧವಾಗಿದ್ದು, ಆಯಾ ಪಂಚಾಯಿತಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಬಿಟ್ಟು ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’

ಇಲ್ಲಿದೆ ನೋಡಿ ವಿಡಿಯೋ:

ನಿಮ್ಮ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಮಾತ್ರ ಕುಡಿಯಲು ಬಳಸಿ. ಸುಸ್ತು ಅಥವಾ ಕೀಲು ನೋವು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಪ್ಲೊರೈಡ್ ಪ್ರಭಾವ ತಗ್ಗಿಸಲು ಕ್ಯಾಲ್ಸಿಯಂ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರ ಸೇವಿಸಿ ಎಂದು ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 am, Thu, 26 February 26

Follow Us
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ