ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲೇ ಆಶಾ ಕಾರ್ಯಕರ್ತೆಯರೊಂದಿಗೆ ಜನ್ಮದಿನ ಆಚರಿಸಿಕೊಂಡ ಆರೋಗ್ಯ ಸಚಿವ ಡಾ.ಕೆ. ಸುಧಾಕರ್

| Updated By: ಆಯೇಷಾ ಬಾನು

Updated on: Jun 27, 2022 | 6:24 PM

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಚಿವರ ಬೆಂಬಲಿಗರು ಜನ್ಮ ದಿನಾಚರಣೆ ಆಚರಿಸಿ ಸಂಭ್ರಮಿಸಿದ್ದಾರೆ. ಇನ್ನು ಮತ್ತೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಫೇಸ್ಬುಕ್ ಮೂಲಕ ಸಚಿವ ಡಾ.ಕೆ.ಸುಧಾಕರ್ರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲೇ ಆಶಾ ಕಾರ್ಯಕರ್ತೆಯರೊಂದಿಗೆ ಜನ್ಮದಿನ ಆಚರಿಸಿಕೊಂಡ ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಸಚಿವ ಡಾ. ಕೆ ಸುಧಾಕರ್
Follow us on

ಚಿಕ್ಕಬಳ್ಳಾಫುರ: ಇಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳ ಸಚಿವ ಡಾ.ಕೆ.ಸುಧಾಕರ್(Dr K Sudhakar) 49 ನೇ ಜನ್ಮ ದಿನಾಚರಣೆ ಹಿನ್ನಲೆ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲೇ ಕೇಕ್ ಕತ್ತರಿಸಿ ಸಚಿವರ ಜನ್ಮ ದಿನಾಚರಣೆ ಆಚರಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಚಿವರ ಬೆಂಬಲಿಗರು ಜನ್ಮ ದಿನಾಚರಣೆ ಆಚರಿಸಿ ಸಂಭ್ರಮಿಸಿದ್ದಾರೆ. ಇನ್ನು ಮತ್ತೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಫೇಸ್ಬುಕ್ ಮೂಲಕ ಸಚಿವ ಡಾ.ಕೆ.ಸುಧಾಕರ್ರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ ನಗರದ ಕಲ್ಯಾಣ ಮಂಟಪದ ಬಳಿ ಆಶಾ ಕಾರ್ಯಕರ್ತೆಯರ ಜೊತೆ ಡಾ.ಕೆ.ಸುಧಾಕರ್ ಜನ್ಮ ದಿನಾಚರಣೆ ಆಚರಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು 49 ಕೆಜಿಯ ಕೇಕ್ ಕತ್ತರಿಸಿ ಶುಭ ಹಾರೈಸಿದ್ದಾರೆ. ಸಚಿವರಿಗೆ ಅಭಿವೃದ್ದಿಯ ಹರಿಕಾರರು ಎಂದು ಬಿರುದು ನೀಡಿ ಕಾರ್ಯಕರ್ತೆಯರು ಸಿಹಿ ತಿನ್ನಿಸಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಗಿಫ್ಟ್​! ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!

Published On - 6:06 pm, Mon, 27 June 22