AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುದಲ್ಲಿ ಡಾ ಸುಧಾಕರ್​ ಸೋತಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಅಂಧಾಭಿಮಾನಿ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಹಾಲಿ ಸಚಿವರಾಗಿದ್ದ ಡಾ.ಕೆ ಸುಧಾಕರ್ ಅವರಿಗೆ ಸೋಲಾಗಿದೆ. ಹೀಗಾಗಿ ಅವರ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುದಲ್ಲಿ ಡಾ ಸುಧಾಕರ್​ ಸೋತಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಅಂಧಾಭಿಮಾನಿ
ಸುಧಾಕರ್ ಹಾಗೂ ಮೃತ ಅಭಿಮಾನಿ
ರಮೇಶ್ ಬಿ. ಜವಳಗೇರಾ
|

Updated on:May 15, 2023 | 11:45 AM

Share

ಮುಖ್ಯಾಂಶಗಳು

  • ಚುನಾವಣೆಯಲ್ಲಿ ಡಾ ಕೆ. ಸುಧಾಕರ್ ಗೆ ಸೋಲು ಹಿನ್ನೆಲೆ
  • ಡಾ.ಕೆ.ಸುಧಾಕರ್ ಅಭಿಮಾನಿ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ
  • ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯ ಬಳಿ ಕೆರೆಯಲ್ಲಿ ಮುಳುಗಿ ಸಾವು.

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಚಿಕ್ಕಬಳ್ಳಾಪುರದಲ್ಲಿ(Chikkaballapura)  ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್(Dr K Sudhakar)​ ಸೋಲುಕಂಡಿದ್ದಾರೆ. ಇದರಿಂದ ಮನನೊಂದು ಅಂಧಾಭಿಮಾನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾನೆ. ಈ ಘಟನೆ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕಬಳ್ಳಾಪುರ ‌ನಗ‌ರದ ಕೋಟೆ ನಿವಾಸಿ ವೆಂಕಟೇಶ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಅವರ ಸೋಲಿನಿಂದ ಬೇಸರಗೊಂಡು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಸಾರಾ ಮಹೇಶ್ ಸೋಲು; ಮನನೊಂದ ಅಭಿಮಾನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ

ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್‌ ವಿರುದ್ಧ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರಾಜಕಾರಣಕ್ಕೆ ಹೊಸದಾಗಿ ಪಾದಾರ್ಪಣೆ ಮಾಡಿ ತಿಂಗಳ ಕಾಲ ಚುನಾವಣಾ ಪ್ರಚಾರ ಮಾಡಿದ್ದ ಪ್ರದೀಪ್ ಈಶ್ವರ್ ಸುಧಾಕರ್ ಅವರನ್ನು ಮಣಿಸಿದ್ದು ಅಚ್ಚರಿಗೆ ಕಾರಣವಾಗಿದೆ. ಪ್ರದೀಪ್ ಈಶ್ವರ್ ಅಬ್ಬರದ ಭಾಷಣ ಮಾಡುವ ಮೂಲಕ ಸಿನಿಮಾ ಡೈಲಾಗ್ ಹೊಡೆದು ಜನರ ಮನ ಗೆದ್ದಿದ್ದಾರೆ. ಈ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ.

ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಸಾರಾ ಮಹೇಶ್ ಅಭಿಮಾನಿ

ಇನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಸಾರಾ ಮಹೇಶ್ (Sa Ra Mahesh) ಅವರು ಸೋಲು ಅನುಭಿಸಿದ ಹಿನ್ನೆಲೆ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ (KR Nagar) ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:52 am, Mon, 15 May 23

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್