ಚಿಕ್ಕಬಳ್ಳಾಪುರ: ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಟ್ವೀಟ್ ಮೂಲಕ ಮನವಿ ಮಾಡಿರುವ ಅವರು ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸುವಂತೆ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಿ.ಟಿ.ರವಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಇಂದಿರಾಗಾಂಧಿ, ಎಲ್ಲರಿಗೂ ಅನ್ನಪೂರ್ಣೇಶ್ವರಿ ತಾಯಿ ಇದ್ದಂತೆ. ಹೀಗಾಗಿ ಅನ್ನಪೂರ್ಣೇಶ್ವರಿ ಹೆಸರು ಇಡುವುದರಲ್ಲಿ ತಪ್ಪೇನಿದೆ? ಆದರೆ ಈ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಅಂತ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಹೇಳಿದ್ದಾರೆ.
ಆನಂದ್ ಸಿಂಗ್, ಎಂಟಿಬಿ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಅಸಮಾಧಾನ ಬಗೆಹರಿಸುತ್ತಾರೆ ಆನಂದ್ ಸಿಂಗ್ ಜೊತೆ ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಕೂಡಾ ಬೊಮ್ಮಾಯಿಯನ್ನು ಭೇಟಿ ಮಾಡಿದ್ದಾರೆ. ಖಾತೆ ಬಗ್ಗೆ ಅಸಮಧಾನಿತರ ಜೊತೆ ಸಿಎಂ ಚರ್ಚೆ ಮಾಡಿದ್ದಾರೆ. ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕೊವಿಡ್ ರೂಲ್ಸ್ ಬ್ರೇಕ್
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆರೋಗ್ಯ ಸಚಿವ ಕೆ.ಸುಧಾಕರ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಂತರವಿಲ್ಲದೆ ನೂರಾರು ಜನ ಜಮಾವಣೆ ಆಗಿದ್ದರು. ದೈಹಕ ಅಂತರವಿಲ್ಲದೆ ಬೆಂಬಲಿಗರು ಸಚಿವರನ್ನು ಸುತ್ತುವರಿದಿದ್ದರು. ಅಲ್ಲದೇ ಸ್ನ್ಯಾಕ್ಸ್ ಪಡೆದುಕೊಳ್ಳಲು ಬಿಜೆಪಿ ಕಾರ್ಯಕರ್ತರು ಮುಗಿಬಿದ್ದರು.
ಇದನ್ನೂ ಓದಿ
ದಾವಣಗೆರೆ: ಅನೈತಿಕ ಪೊಲೀಸ್ ಗಿರಿ; ಕೆಆರ್ಎಸ್ ಪಕ್ಷದ ಮೂರು ಕಾರ್ಯಕರ್ತರ ಬಂಧನ
ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ
(Dr K Sudhakar said the name of Indira Canteen should be changed at Chikkaballapur)