ಬರಗಾಲಕ್ಕೆ ಕಂಗಲಾದ ಚಿಕ್ಕಬಳ್ಳಾಪುರ; ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ

ಆ ಜಿಲ್ಲೆಯ 6 ತಾಲ್ಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಸ್ವತಃ ರಾಜ್ಯ ಸರ್ಕಾರ 6 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳನ್ನಾಗಿ ಘೋಷಣೆ ಮಾಡಿದೆ. ತೀವ್ರ ಬರದಿಂದ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಲ್ಬಣಿಸಿದೆ.

ಬರಗಾಲಕ್ಕೆ ಕಂಗಲಾದ ಚಿಕ್ಕಬಳ್ಳಾಪುರ; ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ
ರೈತರ ಮನವಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2023 | 7:44 PM

ಚಿಕ್ಕಬಳ್ಳಾಪುರ, ಸೆ.19: ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳು ಬರದಿಂದ ಕೂಡಿದ್ದು, ರೈತರು ಕಂಗಾಲಾಗಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ಒಣಗಿ ಹೋಗುತ್ತಿದೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಜಮೀನುಗಳಲ್ಲಿ ಬೆಳೆ ಒಣಗಿ ನಿಂತಿವೆ. ಗ್ರಾಮದಲ್ಲಿ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಹೌದು, ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟ ಸೇರಿದಂತೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲೂ ತೀವ್ರ ಬರ ಉಂಟಾಗಿದೆ.

ಇದರಿಂದ ಜಿಲ್ಲೆಯಲ್ಲಿ ಭಿತ್ತನೆಯಾಗಬೇಕಾಗಿದ್ದ ಒಂದೂವರೆ ಲಕ್ಷ ಎಕರೆ ಜಮೀನಿನಲ್ಲಿ ಭಿತ್ತನೆಯೇ ಆಗಿಲ್ಲ. ಅಲ್ಲಿಷ್ಟು, ಇಲ್ಲಿಷ್ಟು ಭಿತ್ತನೆ ಮಾಡಿದ್ದ ಬೆಳೆಗಳು ಕೂಡ ಒಣಗಿ ನಿಂತಿವೆ. ಇನ್ನು ಜಿಲ್ಲೆಯಾದ್ಯಂತ 27ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲ. ರೈತರ 12 ಖಾಸಗಿ ಕೊಳವೆ ಬಾವಿಗಳನ್ನು ಬಳಸಿಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ಒಂದು ವಾರದಲ್ಲಿ ಮಳೆಯಾಗದಿದ್ದರೆ 67 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದೆ.

ಇದನ್ನೂ ಓದಿ:ಈಗ ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ; ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ ಮಾಡಿದರು!

ಕಳೆದ ನಾಲ್ಕರಿಂದ ಐದು ವರ್ಷಗಳು ಬರ ಬಂದಿರಲಿಲ್ಲ. ಆದರೆ, ಈಗ ಬರ ಕಂಡು ರೈತರು ಕಂಗಾಲಾಗಿದ್ದಾರೆ. ಭಿತ್ತನೆ ಮಾಡಿದ್ದ ರಾಗಿ, ಜೋಳ, ತೊಗರಿ, ನೆಲಗಡಲೆ ಮಣ್ಣಲ್ಲಿ ಮಣ್ಣಾಗಿದ್ದು, ಸರ್ಕಾರದ ಸಹಾಯ ಹಸ್ತಕ್ಕಾಗಿ ರೈತರು ಮೊರೆ ಇಟ್ಟಿದ್ದಾರೆ.

ಸಾಲಬಾದೆ ತಾಳದೆ ರೈತ ಆತ್ಮಹತ್ಯೆ

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕ ಛಬ್ಬಿ ಗ್ರಾಮದಲ್ಲಿ ಸಾಲಬಾದೆ ತಾಳದೆ ರೈತನೊಬ್ಬ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೀಲಪ್ಪ ಗೊರವರ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ಈ ರೈತ ಹೊಲದಲ್ಲಿ ಗೋವಿನ ಜೋಳ ಬೆಳೆದಿದ್ದು, ಮಳೆ ಇಲ್ಲದೆ ಬೆಳೆ ನಾಶವಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ KVG ಬ್ಯಾಂಕ್, ಕೈಗಡ ಸಾಲ ಸೇರಿ ಲಕ್ಷಾಂತರ ರೂ ಸಾಲ‌ ಮಾಡಿದ್ದನಂತೆ. ಈ ಘಟನೆ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us