ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಚಾಲಕ ಲಾರಿ ಚಲಾಯಿಸಿ ಸರಣಿ ಅಪಘಾತ (accident) ಮಾಡಿದ್ದು, ಕಾರು, ಆಟೋ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಹಲವರಿಗೆ ಗಾಯಗಳಾಗಿರುವಂತಹ ಘಟನೆ ಚಿಕ್ಕಬಳ್ಳಾಪುರದ ಬಿಬಿ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ನಡೆದಿದೆ. ತಡರಾತ್ರಿ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಮೆದೇಹಳ್ಳಿ ಗ್ರಾಮದ ಹರೀಶ್(25), ಸಚಿನ್(25), ಕಾಮಸಮುದ್ರ ಗ್ರಾಮದ ನಿವಾಸಿ ಮನು(21) ಮೃತರು. ಗಂಭೀರವಾಗಿ ಗಾಯಗೊಂಡಿರುವ ಇಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ
ಬೆಳಗ್ಗೆ ಜಾಗಿಂಗ್ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಬೆಂಗಳೂರು: ಬೆಳಗ್ಗೆ ಜಾಗಿಂಗ್ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಳೆ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಚ್ಚಿ ದಿವಾ ಹತ್ಯೆ
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಹೊಸಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ದಿವಾಕರ್ ಅಲಿಯಾಸ್ ಡಿಚ್ಚಿ ದಿವಾ(32) ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ತಿಪಟೂರಿನಿಂದ ಹುಚ್ಚನಹಳ್ಳಿಗೆ ತೆರಳುತ್ತಿದ್ದ ವೇಳೆ ನಾಲ್ಕೈದು ದುಷ್ಕರ್ಮಿಗಳ ತಂಡ ರೌಡಿಶೀಟರ್ ದಿವಾನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೊನ್ನವಳ್ಳಿ, ತಿಪಟೂರು ಟೌನ್, ಜಯನಗರ, ದಾಬಸ್ಪೇಟೆ ಠಾಣೆ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ದಿವಾಕರ್ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಾಗಿದ್ದವು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.