ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು
ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.
ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.
ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ ಚಿಕ್ಕಬಳ್ಳಾಪುರದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಜೈಭೀಮ್ ನಗರ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದಲ್ಲಿ ನಡೆದಿದೆ. ವಿದ್ಯುತ್ ಕಂಬ ಬಿದ್ದಿರುವ ಪರಿಣಾಮ ನಂದಿ ಗಿರಿಧಾಮದಲ್ಲಿ ವಿದ್ಯುತ್ ಸಂಪೂರ್ಕ ಸ್ಥಗಿತವಾಗಿದೆ. ಅಲ್ಲದೆ ನಂದಿ ಗಿರಿಧಾಮದ ಕೆಲವೆಡೆ ಮರಗಳು ಕೂಡ ನೆಲಕ್ಕುರುಳಿವೆ. ಅದೃಷ್ಟವಷಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಕೋಲಾರ: ಮಳೆ ನೀರಿನಿಂದ ಕೆರೆಗಳಂತಾದ ರೈತರ ಜಮೀನು ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಕೆ.ಸಿ.ವ್ಯಾಲಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೋಲಾರ ತಾಲೂಕಿನ ನರಸಾಪುರ ಭಾಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ತುಂಬಿ ಹರಿಯುತ್ತಿರುವ ಮಳೆ ನೀರಿನ ಪರಿಣಾಮ ಕ್ಯಾರೆಟ್, ಟೊಮೆಟೋ, ರಾಗಿ, ಕೊತ್ತಂಬರಿ, ಸೇರಿದಂತೆ ಇನ್ನಿತರ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿದೆ.
ಇದನ್ನೂ ಓದಿ: ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್
Published On - 7:50 am, Wed, 25 August 21