AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಮತ್ತೆ 2 ಬಾರಿ ಭೂ ಕಂಪನ; ಬೆಚ್ಚಿಬಿದ್ಧ ಗ್ರಾಮಸ್ಥರು, ಶಾಲೆಯಿಂದ ಹೊರಗೋಡಿದ ಮಕ್ಕಳು

Earthquake in Chikkaballapur: ಚಿಕ್ಕಬಳ್ಳಾಫುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ, ಬೈಯಪ್ಪನಹಳ್ಳಿ, ಬಂಡಹಳ್ಳಿ, ಪರೇಸಂದ್ರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಭೂ ಕಂಪನವಾಗಿದೆ. ನಿನ್ನೆ ಬೆಳಿಗ್ಗೆ ಎರಡು ಭಾರಿ ಲಘು ಭೂಕಂಪವಾಗಿತ್ತು. ಇದೀಗ ಮತ್ತೆ ಭೂಮಿ ಕಂಪಿಸಿರುವುದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೆ 2 ಬಾರಿ ಭೂ ಕಂಪನ; ಬೆಚ್ಚಿಬಿದ್ಧ ಗ್ರಾಮಸ್ಥರು, ಶಾಲೆಯಿಂದ ಹೊರಗೋಡಿದ ಮಕ್ಕಳು
ಚಿಕ್ಕಬಳ್ಳಾಪುರದಲ್ಲಿ ಭೂಮಿ ಕಂಪನ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 23, 2021 | 3:07 PM

Share

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ, ಬೈಯಪ್ಪನಹಳ್ಳಿ, ಬಂಡಹಳ್ಳಿ, ಪೆರೇಸಂದ್ರ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪನವಾಗಿದೆ. ನಿನ್ನೆ ಮಂಡಿಕಲ್, ಭೋಗಪರ್ತಿ ಸುತ್ತಮುತ್ತ ಭೂಕಂಪ ಸಂಭವಿಸಿತ್ತು. ಭೂ ಕಂಪನವಾಗಿ ಮನೆಯಲ್ಲಿದ್ದ ಪಾತ್ರೆ, ಸಾಮಾನುಗಳು ಅದುರಿಬಿದ್ದಿವೆ.

ಮಂಡಿಕಲ್ ಗ್ರಾಮದಲ್ಲಿ ಎರಡು ಸೆಕೆಂಡ್​ಗಳ ಕಾಲ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಹೈಸ್ಕೂಲ್ ವಿಸ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ. ಮಂಡಿಕಲ್ ಸರ್ಕಾರಿ ಹೈಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಶಾಲೆಯ ಒಳಗೆ ಹೋಗಲು ವಿದ್ಯಾರ್ಥಿಗಳ ಹಿಂದೇಟು ಹಾಕಿದ್ದಾರೆ. ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಳ್ಳಾಫುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ, ಬೈಯಪ್ಪನಹಳ್ಳಿ, ಬಂಡಹಳ್ಳಿ, ಪರೇಸಂದ್ರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಭೂ ಕಂಪನವಾಗಿದೆ. ನಿನ್ನೆ ಬೆಳಿಗ್ಗೆ ಎರಡು ಭಾರಿ ಲಘು ಭೂಕಂಪವಾಗಿತ್ತು. ಇದೀಗ ಮತ್ತೆ ಭೂಮಿ ಕಂಪಿಸಿರುವುದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮಂಡಿಕಲ್ ಹಾಗೂ ಭೋಗಪರ್ತಿ ಬಳಿ ನಿನ್ನೆ ಭೂಕಂಪನ ದಾಖಲಾಗಿತ್ತು.

ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪವಾಗಿರುವುದಾಗಿತ್ತು. ಜಿಲ್ಲೆಯಲ್ಲಿ 2 ಬಾರಿ ಭೂಮಿ ಕಂಪಿಸಿದ್ದು ರಿಕ್ಟರ್​ ಮಾಪಕದಲ್ಲಿ 2.9 ರಿಂದ 3 ರಷ್ಟು ತೀವ್ರತೆ ದಾಖಲಾಗಿತ್ತು. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ರೆಡ್ಡಿ ಗೊಲ್ಲವಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಸ್ಫೋಟದ ಸದ್ದು ಕೇಳಿ ಬಂದಿತ್ತು. ಜಿಲ್ಲೆಯಲ್ಲಿ 2 ಬಾರಿ ಭೂಮಿ ಕಂಪಿಸಿದ್ದು ಲಘು ಭೂಕಂಪವಾಗಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ.) ಸ್ಪಷ್ಟ ಪಡಿಸಿತ್ತು. ಇಂದು ಮತ್ತೊಮ್ಮೆ ಭೂ ಕಂಪನವಾಗಿದೆ.

ಇದನ್ನೂ ಓದಿ: ಕಲಬುರಗಿ ಲಘುಭೂಕಂಪನಕ್ಕೆ ಪರಿಹಾರ: ತಾತ್ಕಾಲಿಕ ಟಿನ್ ಶೆಡ್ ನಿರ್ಮಾಣಕ್ಕೆ 3 ಕೋಟಿ ರೂ. ಅನುದಾನ ಮಂಜೂರು

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ