AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಕವಿ ಕುವೆಂಪುರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣ: ಆದಿಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು

ರಾಷ್ಟ್ರಕವಿ ಕುವೆಂಪು ಅರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು. ನಿನ್ನೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಭೇಟಿ ನೀಡಿದ್ದು, ಇಂದು ಪಠ್ಯ ಪುಸ್ತಕ ನಿರ್ದೇಶನಾಲಯ ತಂಡ ಭೇಟಿ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪುರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣ: ಆದಿಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು
ಆದಿಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: May 31, 2022 | 12:46 PM

Share

ಚಿಕ್ಕಬಳ್ಳಾಪುರ: ರಾಷ್ಟ್ರಕವಿ ಕುವೆಂಪು ಅರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆ ನಿನ್ನೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಶ್ರೀಗಳನ್ನ ಭೇಟಿ ಮಾಡಿದರು. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಇಂದು ಪಠ್ಯ ಪುಸ್ತಕ ನಿರ್ದೇಶನಾಲಯದ ನಿರ್ದೇಶಕ ಮಾದೇಗೌಡ ನೇತೃತ್ವದ ತಂಡ, ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಆಗಮಿಸಿ ಶ್ರೀಗಳ ಭೇಟಿ ಮಾಡಿದರು. ಪಠ್ಯ ಪರಿಷ್ಕರಣೆ ವೇಳೆ ಕುವೆಂಪುರವರ ಪಠ್ಯ ಕೈ ಬಿಟ್ಟ ಬಗ್ಗೆ ಶ್ರೀಗಳಿಗೆ ಸ್ಪಷ್ಟೀಕರಣ ನೀಡಲಿದೆ. ಪರಿಷ್ಕೃತ ಪುಸ್ತಕಗಳ ಸಮೇತ ಆಗಮಿಸಿರುವ ಅಧಿಕಾರಿಗಳ ತಂಡ, ಶ್ರಿ ನಿರ್ಮಲಾನಂದನಾಥ ಶ್ರೀ ಗಳಿಗೆ ಬದಲಾವಣೆ ಮಾಡಿರುವ ಹಾಗೂ ಹೊಸದಾಗಿ ಸೇರ್ಪಡೆ ಮಾಡಿರುವ ಪಠ್ಯಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ಮತ್ತು ಹಿರಿಯ ಸಹಾಯಕ ನಿರ್ದೇಶಕಿ ಉಷಾ ಅಧಿಕಾರಿಗಳ ತಂಡ ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖ‌ಮಠದಲ್ಲಿ ಭೇಟಿಯಾಗಿ ಚರ್ಚೆ ಮಾಡಲಾಗಿದೆ.

ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಮಾಧ್ಯಮ ಹೇಳಿಕೆ ಪೂರ್ಣ ಪಾಠ ಹೀಗಿದೆ:

ನಮ್ಮ ನಾಡು ಕಂಡ ಅಪ್ರತಿಮ ಕವಿ, ದಾರ್ಶನಿಕ, ಸರ್ವೋದಯ ತತ್ವ ಪ್ರತಿಪಾದಕರಾದ ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ಕವಿಗಳು; ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಅವರ ಸಾಹಿತ್ಯ ಸರ್ವರನ್ನೂ ಒಳಗೊಳ್ಳುವ, ಸರ್ವರಹಿತ ಬಯಸುವ ಕ್ರಾಂತದೃಷ್ಟಿಯನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ, ಧಾರ್ಮಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ನಾಡು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕು ಎಂಬ ಕನಸು ಕಂಡವರು ಅವರು. ಅವರ ‘ಕಾನೂರು ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮದುಮಗಳು’ ಮಹಾಕಾದಂಬರಿಗಳು, ‘ಶೂದ್ರ ತಪಸ್ವಿ’, ‘ಜಲಗಾರ’, ‘ಬೆರಳ್ಗೆ ಕೊರಳ್’ ಮುಂತಾದ ಶ್ರೇಷ್ಠ ನಾಟಕಗಳು, ‘ರಾಮಾಯಣ ದರ್ಶನಂ’ ಮಹಾಕಾವ್ಯ ಹಾಗೂ ಸಾವಿರಾರು ಪದ್ಯಗಳು, ಲೇಖನಗಳ ಮೂಲಕ ಕನ್ನಡ ಸಾಹಿತ್ಯದ ಕ್ಷಿತಿಜವನ್ನು ವಿಸ್ತರಿಸಿದ ಮಹಾಕವಿ ಕುವೆಂಪು ಎಂದು ಹೇಳಿದರು.

ಇದನ್ನೂ ಓದಿ: ಪಾರ್ವತಮ್ಮ ಐದನೇ ವರ್ಷದ ಪುಣ್ಯಸ್ಮರಣೆ; ರಾಜ್​ಕುಮಾರ್ ಅಕಾಡೆಮಿ ಸಾಧನೆಯನ್ನು ಅಮ್ಮನಿಗೆ ಅರ್ಪಿಸಿದ ರಾಘಣ್ಣ

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ; ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ

ಪಠ್ಯ ಪುಸ್ತಕ (Text Book) ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಲೇ ಇದೆ. ವಿರೋಧದ ನಡುವೆ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥರನ್ನು (Rohith Chakrathirtha) ಸಮಿತಿಯಿಂದ ಕೈಬಿಡುವಂತೆ ಒತ್ತಾಯವೂ ಕೇಳಿಬಂದಿದ್ದು, ಇಂದು (ಮೇ 31) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ವಿವಿಧ ಸಂಘಟನೆಗಳಿಂದ ನಡೆಯುವ ಪ್ರತಿಭಟನೆಯಲ್ಲಿ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು ಸಾಥ್ ನೀಡಲಿದ್ದಾರೆ. ಹಾಗೇ, ಹಲವು ವಿದ್ಯಾರ್ಥಿ ಸಂಘಟನೆಗಳು ಕೂಡಾ ಭಾಗಿಯಾಗಲಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ