Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಫುರ ಜಿಲ್ಲೆಯ ಗೌರಿಬಿದನೂರು ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಇನ್ನುಳಿದಂತೆ 10 ಜನರಿಗೆ ಗಾಯವಾಗಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ
ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡದಿಂದ ಓರ್ವ ಸಾವು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 10, 2024 | 3:44 PM

ಚಿಕ್ಕಬಳ್ಳಾಫುರ, ಫೆ.10: ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಗೌರಿಬಿದನೂರು(Gauribidanur) ನಗರದ ಶಾರದಾ ಶಾಲೆಯಲ್ಲಿ ನಡೆದಿದೆ. ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಇದರಿಂದ ಪೆಂಡಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪಸರಿಸಿದ್ದು, ಘಟನೆಯಲ್ಲಿ ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬಾತ ಕೊನೆಯುಸಿರೆಳೆದರೆ, ಹತ್ತುಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗ ದಾಖಲು ಮಾಡಲಾಗಿದೆ.

ಮೆದುಳು ಜ್ವರಕ್ಕೆ 10 ವರ್ಷದ ಬಾಲಕ ಬಲಿ

ವಿಜಯಪುರ: ಮೆದುಳು ಜ್ವರಕ್ಕೆ ಹತ್ತು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಗೋಳಗುಮ್ಮಟ ಪ್ರದೇಶದಲ್ಲಿ ನಡೆದಿದೆ. ರಜಿತ್ ಅಳ್ಳಿಮೋರೆ ( 10 ) ಮೃತ ಬಾಲಕ. ಕಳೆದ ಒಂದು ವಾರದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಾಲಕನ ಸಾವಿನಿಂದ ಕುಟುಂಬಸ್ಥರಲ್ಲಿ ದುಖಃ ಮನೆ ಮಾಡಿದೆ.

ಜಿಲ್ಲೆಯ ಮಕ್ಕಳಲ್ಲಿ ಹೆಚ್ಚಾಗಿ ಮೆದಳು ಜ್ವರ ಕಂಡು ಬರುತ್ತಿದ್ದು, ಮಕ್ಕಳಲ್ಲಿ ಜ್ವರ ಕಂಡು ಬಂದಾಗ ನಿರ್ಲಕ್ಷ್ಯ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಈ ಬಾಲಕನ ಸಾವೇ ನಿದರ್ಶನವಾಗಿದೆ. ಮೇಲಿಂದ ಮೇಲೆ ಜ್ವರ ಬಂದು ಮೆದುಳಿಗೆ ಹಾನಿ ಮಾಡುವ ಜ್ವರಕ್ಕೆ ತ್ವರಿತ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಇದನ್ನೂ ಓದಿ:ಮತ್ತೊಂದು ವಿದ್ಯುತ್ ಅವಘಡ.. ವಿಕಲಚೇತನ ಬಾಲಕನಿಗೆ ಹೈ ಕರೆಂಟ್ ಶಾಕ್, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ, ಹೆತ್ತವರ ಕಣ್ಣೀರು

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

ಕೊಪ್ಪಳ: ಕುಷ್ಟಗಿ ತಾಲೂಕಿನ ಮಿಟ್ಟಲಕೋಡದ ಗ್ರಾಮದಲ್ಲಿ ತಡರಾತ್ರಿ ವಿದ್ಯುತ್​​ ಶಾರ್ಟ್​​ ಸರ್ಕ್ಯೂಟ್​​ನಿಂದ ಮನೆಗೆ ಬೆಂಕಿ ತಗುಲಿದೆ. ಬೆಳ್ಳಿ, ಬಂಗಾರ, ದವಸ ಧಾನ್ಯ, ಗ್ಯಾಸ್​​ ಸಿಲಿಂಡರ್​​ ಸೇರಿದಂತೆ 15 ಲಕ್ಷಕ್ಕೂ ಅಧಿಕ ವಸ್ತುಗಳು ಹಾನಿಯಾಗಿದೆ. ಎಚ್ಚರಪ್ಪ ಮಾನಪ್ಪ ಬಡಿಗೇರ್​​ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಾಯಚೂರಿನಲ್ಲಿ ಬೊಲೆರೊ ಪಲ್ಟಿ ಯುವಕ ಸಾವು

ರಾಯಚೂರು: ತಾಲೂಕಿನ ಯಾಪಲದಿನ್ನಿ ಬಳಿಯ ಎನ್ ಎಚ್ 150 (C) ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಲ್ಟಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಚಂದ್ರಬಂಡಾ ಗ್ರಾಮದ ಆಂಜನೇಯ(23)ಮೃತ ಪ್ರಯಾಣಿಕ. ಬೊಲೆರೊದಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕ ವಿರೇಶ್ ನಿರ್ಲಕ್ಷಕ್ಕೆ ಬೊಲೆರೊ ಪಲ್ಟಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಬ್ಬ ಗಾಯಾಳು ನಾಗರಾಜ್​ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ರಾಯಚೂರು ಎಸ್ ಪಿ ನಿಖಿಲ್.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Sat, 10 February 24