ಸಂವಿಧಾನ ಆಶೋತ್ತರದ ಜೀವನ ಎಲ್ಲರಿಗೂ ಸಿಗಬೇಕು: ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಆಶಯ

ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸರ್ಕಾರವು ರೂಪಿಸಿದ ಯೋಜನೆಗಳು ಹಾಗೂ ಇತರೆ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸುವ ಕಾರ್ಯವನ್ನು ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ -ಉಪಲೋಕಾಯುಕ್ತ, ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

ಸಂವಿಧಾನ ಆಶೋತ್ತರದ ಜೀವನ ಎಲ್ಲರಿಗೂ ಸಿಗಬೇಕು: ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಆಶಯ
ಭಾರತ ಸಂವಿಧಾನದ ಆಶೋತ್ತರದ ಜೀವನ ಎಲ್ಲರಿಗೂ ಸಿಗಲಿ: ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಆಶಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 05, 2022 | 4:40 PM

ಚಿಕ್ಕಬಳ್ಳಾಪುರ: ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋಷವಾಗಿ ಬಾಳುವುದೇ ಭಾರತ ಸಂವಿಧಾನದ ಅಶೋತ್ತರದ ಜೀವನ (Constitutional Rights) ಎಂದು ಉಪಲೋಕಾಯುಕ್ತರು ಹಾಗೂ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ (Justice KN Phaneendra) ಹೇಳಿದರು. ಚಿಕ್ಕಬಳ್ಳಾಪುರ (Constitutional Rights) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದು ಕೊರತೆ ದೂರುಗಳ ವಿಚಾರಣೆ ನಡೆಸುವ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತ ಸಂವಿಧಾನದ ಮಹತ್ವ, ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಕಾರ್ಯ ಪ್ರಕ್ರಿಯೆಗಳನ್ನು ಮನಮುಟ್ಟುವಂತೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

ಪರಸ್ಪರರನ್ನು ಗೌರವಿಸಿ:

ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಬದುಕಬೇಕಾದರೆ ಒಬ್ಬರು ಮತ್ತೊಬ್ಬರ ಹಕ್ಕುಗಳನ್ನು ಪರಸ್ಪರ ಗೌರವಿಸಬೇಕು. ಜೊತೆಗೆ ಸಂವಿಧಾನದಲ್ಲಿ ನೀಡಿರುವ ಕರ್ತವ್ಯಗಳನ್ನು ಎಲ್ಲರೂ ಪಾಲಿಸಿದರೆ ಸರ್ವರಿಗೂ ಉತ್ತಮ ಬದುಕು ದೊರಕುತ್ತದೆ. ಈ ಹಕ್ಕುಗಳಿಗೆ ದಕ್ಕೆಯಾದಾಗ, ಕಾರ್ಯಾಂಗ ಯೋಜನೆಗಳನ್ನು ಅನುಷ್ಟಾನಗೊಳಿಸಲು ವಿಫಲವಾದರೆ ಹಾಗೂ ಶಾಸಕಾಂಗ ತಪ್ಪು ಮಾಡಿದರೆ ಆ ಎಲ್ಲ ಲೋಪದೋಷಗಳನ್ನು ಸರಿಪಡಿಸಲು ಸರ್ಕಾರಕ್ಕೆ ಪ್ರತೇಕವಾಗಿ ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಈ ಸಂಸ್ಥೆಯ ಫಲಶೃತಿಯನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರಿಂದ ಅಹವಾಲು, ದೂರು ಅರ್ಜಿಗಳನ್ನು ಸ್ವೀಕರಿಸುವ ಜೊತೆಗೆ ಜಾಗೃತಿಯುಂಟು ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ ಸಾರ್ವಜನಿಕರು ಈ ಸಂಸ್ಥೆಯನ್ನು ಸಮಪರ್ಕವಾಗಿ ಬಳಸಿಕೊಳ್ಳಲು ಮನವಿ ಮಾಡಿದರು. (ವರದಿ: ಭೀಮಪ್ಪ ಪಾಟೀಲ್, ಟಿವಿ 9)

ಲೋಕಾಯುಕ್ತ ಸಂಸ್ಥೆಯ ಸ್ಥಾಪನೆ ಉದ್ದೇಶ, ಹಿನ್ನೆಲೆ, ಕಾರ್ಯವ್ಯಾಪ್ತಿ ಹಾಗೂ ಸಂಸ್ಥೆಯ ಕಾರ್ಯಮಾರ್ಗಸೂಚಿ ಪ್ರಕ್ರಿಯೆಗಳ ಮಾಹಿತಿ ನೀಡಿದರು. ಸಾರ್ವಜನಿಕರು ಲಿಖಿತ ಅರ್ಜಿ ಸಲ್ಲಿಸುವ ವಿಧಾನ, ದಾಖಲೆ ಸಹಿತ ಅರ್ಜಿ ಸಲ್ಲಿಕೆ ಹಾಗೂ ಯಾವ ರೀತಿಯ ಅರ್ಜಿಗಳನ್ನು ಹಾಕಬಹುದು, ಈ ಎಲ್ಲ ವಿಚಾರಗಳ ಬಗ್ಗೆ ವಿಸ್ಕೃತವಾಗಿ ಸಾರ್ವಜನಿಕರಿಗೆ ತಿಳಿಸಿಕೊಟ್ಟ ನಂತರ ಅಹವಾಲುಗಳು, ದೂರುಗಳ ಅರ್ಜಿಗಳನ್ನು ಖುದ್ದು ಸ್ವೀಕರಿಸಿದರು.

ಉಪಲೋಕಾಯುಕ್ತರು ಸ್ವೀಕರಿಸಿದ ಕೆಲವು ದೂರು ಅರ್ಜಿಗಳ ಬಗ್ಗೆ ಸ್ಥಳದಲ್ಲೇ ತೀರ್ಮಾನ ಕೈಗೊಂಡು ವಿಲೇವಾರಿ ಮಾಡಿದರು. ಮತ್ತಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಮಯ ನಿಗದಿ ಮಾಡಿ ತ್ವರಿತವಾಗಿ ಪರಿಹರಿಸಲು ಆದೇಶಿಸಿದರು. ಮಧ್ಯಾಹ್ನದ ವೇಳೆಗೆ ಒಟ್ಟು 70 ಅರ್ಜಿಗಳನ್ನು ವಿಚಾರಣೆ ನಡೆಸಿ ವಿಲೇವಾರಿ ಮಾಡುವ ಪ್ರಯತ್ನ ನಡೆಸಿದರು. ಕೆಲವೊಂದು ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ವಿಲೇವಾರಿ ಮಾಡಿದರು. ಕಂದಾಯ ಇಲಾಖೆಗೆ ಸಂಬಂಧಿಸಿದ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಪ್ರಕರಣಗಳು ಲೋಕಾಯುಕ್ತರ ಮುಂದೆ ವರದಿಯಾದವು. ಪ್ರಮುಖವಾಗಿ ಜಿಲ್ಲಾ ಕೇಂದ್ರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿ ಪ್ರಕರಣವು ಲೋಕಾಯುಕ್ತರ ಗಮನ ಸೆಳೆಯಿತು. ಉಪಲೋಕಾಯುಕ್ತರು ಅರ್ಜಿ ವಿಲೇವಾರಿ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಿದರು. ಖುದ್ದು ಉಪಲೋಕಾಯುಕ್ತರು ಅರ್ಜಿ ದೂರುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲು ಪ್ರಯತ್ನಿಸಿದ್ದು,ಸಾರ್ವಜನಿಕರಲ್ಲಿ ಹಾಗೂ ಅರ್ಜಿದಾರರಿಗೆ ಆತ್ಮವಿಶ್ವಾಸ ಮೂಡಿತು.

ಮಾಧ್ಯಮ ಪಾತ್ರ ಮಹತ್ವದ್ದು:

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯನಡೆಗಳ ಬಗ್ಗೆ ಸರ್ಕಾರದ ನಾಲ್ಕನೇ ಅಂಗವಾದ ಮಾಧ್ಯಮ ರಂಗವು ನಿರಂತರ ನಿಗಾವಹಿಸುತ್ತಿದೆ. ಯಾವುದೇ ಅಂಗಗಳಲ್ಲಿನ ಲೋಪದೋಷಗಳನ್ನು ಪ್ರಜೆಗಳ ಮುಂದಿಟ್ಟು ಸರಿಪಡಿಸುವಂತಹ ಮಹತ್ವದ ಜವಬ್ದಾರಿಯನ್ನು ಮಾಧ್ಯಮ ಕ್ಷೇತ್ರ ನಿರ್ವಹಿಸುವುದರಿಂದ ಈ ಕ್ಷೇತ್ರದ ಪಾತ್ರ ಮಹತ್ವದ್ದು, ಆದ್ದರಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯ ವಿಧಾನವನ್ನು ಹಳ್ಳಿ ಹಳ್ಳಿಯ ಕಟ್ಟ ಕಡೆಯ ವ್ಯಕ್ತಿಗೂ ತಾವೆಲ್ಲರೂ ತಲುಪಿಸಲು ಸಂಸ್ಥೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿ:

ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸರ್ಕಾರವು ರೂಪಿಸಿದ ಯೋಜನೆಗಳು ಹಾಗೂ ಇತರೆ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸುವ ಕಾರ್ಯವನ್ನು ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ. ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ, ನಿಗ್ರಹ ಮಾಡುವುದು ಲೋಕಾಯುಕ್ತ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಭಾಗದ ಜನರಿಗೆ ಲೋಕಾಯುಕ್ತ ಸಂಸ್ಥೆಯು ಇದೆ ಎಂಬ ಅರಿವಿಲ್ಲ. ಹೇಗೆ ದೂರು ಸಲ್ಲಿಸಬೇಕು? ನಂತರ ಪ್ರಕ್ರಿಯೆ ಏನು ಎಂಬುದು ತಿಳಿದಿಲ್ಲ. ಈ ಕುರಿತು ಗ್ರಾಮೀಣ ಭಾಗದಲ್ಲಿ ಲೋಕಾಯುಕ್ತ ಸಂಸ್ಥೆಯ ಮಹತ್ವನ್ನು ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಹಿಂದೆ ಅಸ್ವಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ನಡೆಯುತ್ತಿದ್ದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ವರ್ಗಾವಣೆಯಾದ ಮೇಲೆ ನಮ್ಮ ಸಂಸ್ಥೆಯ ಕಾರ್ಯ ವ್ಯಾಪ್ತಿಯಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿಚಾರಣೆ ಮತ್ತು ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸಲು ತಾಂತ್ರಿಕ ವರ್ಗ ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗವನ್ನು ಸಂಸ್ಥೆಯಿಂದಲೇ ಪ್ರತ್ಯೇಕವಾಗಿ ನೇಮಕ ಮಾಡಿಕೊಳ್ಳುವ ಆಲೋಚನೆ ಇದೆ ಎಂದರು.

ನಮ್ಮ ಸಂಸ್ಥೆಗೆ ನೇಮಕವಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಜಿಲ್ಲಾ ಮಟ್ಟ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತಿದೆ. ಸಂಸ್ಥೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು, ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಪ್ರಸ್ತುತ ಸರ್ಕಾರ ಒದಗಿಸುತ್ತಿದೆ. ಒಟ್ಟಾರೆಯಾಗಿ ಸಂಸ್ಥೆಯನ್ನು ಇನ್ನಷ್ಟು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಅಮ್ಮನಬಾವಿ, ಉಪನಿಬಂಧಕರಾದ ಚನ್ನಕೇಶವರೆಡ್ಡಿ, ಸಹಾಯಕ ನಿಬಂಧಕರಾದ ಸಿ.ಚಂದ್ರಶೇಖರ್, ಗೌರವಾನ್ವಿತ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ‌ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಭಾಗವಹಿಸಿದ್ದರು. 

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ