Family Politics! ತಂದೆ ಸಂಸದ-ಮಗ ಶಾಸಕ-ಬೀಗ ಶಾಸಕ: ಫ್ಯಾಮಿಲಿ ಪಾಲಿಟಿಕ್ಸ್ ಅಂದ್ರೆ ಇದೇನಾ!?
ವಯಸ್ಸು, ಅನಾರೋಗ್ಯದಿಂದ ಬಳಲಿರುವ ಸಂಸದ ಬಿ.ಎನ್. ಬಚ್ಚೇಗೌಡ ಈಗಾಗಲೇ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮಗ ಶರತ್ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕ ಶರತ್ ಬಚ್ಚೇಗೌಡರ ಮಾವ ಕೆ.ಎಚ್. ಪುಟ್ಟಸ್ವಾಮಿಗೌಡ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರು
ಚಿಕ್ಕಬಳ್ಳಾಪುರ: ಬಿ.ಎನ್.ಬಚ್ಚೇಗೌಡ (BN Bache Gowda ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್.ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದಾರೆ. ಇವರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದು, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನದ ನಿಗಮಮಂಡಳಿಯ ಅಧ್ಯಕ್ಷರೂ ಆಗಿದ್ದಾರೆ ( Family Politics).
ಶರತ್ ಬಚ್ಚೇಗೌಡರ ಮಾವ ಗೌರಿಬಿದನೂರಿನ ಶಾಸಕ: ಶಾಸಕ ಶರತ್ ಬಚ್ಚೇಗೌಡರ ಮಾವ ಕೆ.ಎಚ್. ಪುಟ್ಟಸ್ವಾಮಿಗೌಡ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದು, ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ.
ಶರತ್ ಪತ್ನಿಗೆ ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್? ಇನ್ನು ಶರತ್ ಬಚ್ಚೇಗೌಡ ಪತ್ನಿ ಹಾಗೂ ಕೆ.ಎಚ್.ಪುಟ್ಟಸ್ವಾಮಿಗೌಡರವರ ಮಗಳಾದ ಪ್ರತಿಭಾ ಶರತ್ ಬಚ್ಚೇಗೌಡರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಚುನಾವಣೆ ಸ್ಪರ್ಧೆಗೆ ಶರತ್ ಬಚ್ಚೇಗೌಡ ಕುಟುಂಬ ಸಹಮತ ತೋರಿಸಿಲ್ಲ ಎನ್ನಲಾಗಿದೆ.
ಚುನಾವಣೆ ರಾಜಕಾರಣದಿಂದ ನಿವೃತ್ತಿ ಘೋಷಣೆ: ವಯಸ್ಸು, ಅನಾರೋಗ್ಯದಿಂದ ಬಳಲಿರುವ ಸಂಸದ ಬಿ.ಎನ್. ಬಚ್ಚೇಗೌಡ ಈಗಾಗಲೇ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮಗ ಶರತ್ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Also Read: ಯದುವೀರ್ ಒಡೆಯರ್ ವಿರುದ್ಧ ಟೀಕಿಸದಂತೆ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ
ಮನೆಯ ಹಿರಿಯ ರಾಜಕಾರಣಿ ಬಿ.ಎನ್. ಬಚ್ಚೇಗೌಡರ ಪರಿಚಯ ಹೀಗಿದೆ: ಬಿ.ಎನ್. ಬಚ್ಚೇಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್. ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಬಿ.ಎನ್. ಬಚ್ಚೇಗೌಡರು ಜನತಾ ಪಕ್ಷದಿಂದ ಗುರುತಿಸಿಕೊಂಡು ತಮ್ಮ ರಾಜಕೀಯವನ್ನು ಆರಂಭಿಸಿದವರು.
1978 ರಲ್ಲಿ ಜನತಾ ಪಕ್ಷದ ಮೂಲಕ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರ ಮೂಲಕ 1985, 1994, 1999 ಹಾಗೂ 2008 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಶಾಸಕರಾಗಿ ಒಟ್ಟು 5 ಬಾರಿ ಆಯ್ಕೆಯಾದರು. 1989, 2004, 2013 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರ ಸೋಲನ್ನು ಅನುಭವಿಸಿದ್ದರು. ನಂತರ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.
2014 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎನ್.ಬಚ್ಚೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ಧ ಸೋತಿದ್ದರು. 2019ರಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್‍ನ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ದ ಗೆಲುವು ಸಾಧಿಸುವುದರ ಮೂಲಕ ಹಾಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:58 pm, Sat, 16 March 24