ಚಿಕ್ಕಬಳ್ಳಾಪುರ: ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ: ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಸಾವಿನ ಸಂಖ್ಯೆ 12ಕ್ಕೆ ಏರಿಕೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 26, 2023 | 10:22 AM

ಚಿಕ್ಕಬಳ್ಳಾಫುರ, (ಅಕ್ಟೋಬರ್ 26): ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು,  ಸಾವಿನ ಜನ 12ಕ್ಕೆ ಏರಿಕೆಯಾಗಿದೆ. ಇಂದು (ಗುರುವಾರ) ನಸುಕಿನ ವೇಳೆ ಚಿಕ್ಕಬಳ್ಳಾಪುರ(Chikkaballapura) ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ 12 ಜನ ಮೃತಪಟ್ಟಿದ್ದಾರೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ಆದ್ರೆ, ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 12 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 12 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಅವರ ಹೆಸರು ಹಾಗೂ ಅವರು ಎಲ್ಲಿಯವರು ಎಂದು ಇನ್ನಷ್ಟೇ ತಿಳಿದುಬರಬೇಕಿದೆ. ಇನ್ನು ಘಟನಾ ಸ್ಥಳದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನು ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮಗು, ಮೂವರು ಮಹಿಳೆಯರು ಸೇರಿ 12 ಜನರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎನ್ನುವುದು ಗೊತ್ತಾಗಿದೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

AP 02, CH 1021 ಹಿಂದೂಪುರ ಆರ್​ಟಿಓನಲ್ಲಿ ನೋಂದಣಿಯ ಟಾಟಾ ಸುಮೊ, ಆಂಧ್ರದ ಗೋರಂಟ್ಲದಿಂದ ಬೆಂಗಳೂರಿನ ಬೊಮ್ಮನಹಳ್ಳಿ ತೆರಳುತ್ತಿತ್ತು. 7 ಸೀಟಿನ ಸಾಮರ್ಥ್ಯದ ಸುಮೊದಲ್ಲಿ 13 ಜನ ಪ್ರಯಾಣ ಪ್ರಯಾಣಿಸುತ್ತಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದವರು ಇದೀಗ ಮಸಣ ಸೇರಿದ್ದುಮ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 am, Thu, 26 October 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ