AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ನಂದಿಬೆಟ್ಟಕ್ಕೆ ಇನ್ಮೇಲೆ ಖಾಸಗಿ ವಾಹನಗಳ ಪ್ರವೇಶ ನಿಷೇಧ

ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್​ ಬಸ್​ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದೆ.

ಪ್ರವಾಸಿಗರ ಗಮನಕ್ಕೆ: ನಂದಿಬೆಟ್ಟಕ್ಕೆ ಇನ್ಮೇಲೆ ಖಾಸಗಿ ವಾಹನಗಳ ಪ್ರವೇಶ ನಿಷೇಧ
ನಂದಿಬೆಟ್ಟ
ಗಂಗಾಧರ​ ಬ. ಸಾಬೋಜಿ
|

Updated on: Sep 01, 2023 | 12:21 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 1: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ (Nandi Hills) ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗುತ್ತಿದ್ದು, ಹಾಗಾಗಿ ಪ್ರವಾಸಿಗರಿಗಾಗಿ ಎಲೆಕ್ಟ್ರಾನಿಕ್​ ಬಸ್​ಗಳನ್ನು ಕಲ್ಪಿಸಲು ನಿರ್ಧರಿಸಲಾಗುತ್ತಿದೆ.

ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದ್ದು, ಮುಂದಿನ 6-8 ತಿಂಗಳಲ್ಲಿ ನಂದಿ ಬೆಟ್ಟವನ್ನು ಒಂದು ದಿನದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಹಾಗಾಗಿ ನಂದಿಬೆಟ್ಟ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಸಂಚಾರ ಕಡಿಮೆ ಮಾಡುವ ಮೂಲಕ ಪ್ರವಾಸಿಗರಿಗೆ ಪ್ರಕೃತಿಯ ರಮಣೀಯ ಸೌಂದರ್ಯ ಮತ್ತು ಐತಿಹಾಸಿಕ ಸ್ಥಳದ ಮಹತ್ವವನ್ನು ಆನಂದಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮತ್ತೊಂದು ವಿಶೇಷತೆ ಕಾದಿದ್ದು, ಕೇಬಲ್ ಕಾರು ಆಯ್ಕೆ ಸಹ ಇದೆ. ಒಂದು ವರದಿಯ ಪ್ರಕಾರ ಕೇಬಲ್ ಕಾರಿನಲ್ಲಿ ಪ್ರಯಾಣಿಸಲು ಪ್ರತಿ ವ್ಯಕ್ತಿಗೆ ಸುಮಾರು 250-300 ರೂ. ಎಂದು ಅಂದಾಜಿಸಲಾಗಿದೆ.

ನಾವು ನಂದಿ ಬೆಟ್ಟವನ್ನು ಬೆಂಗಳೂರಿಗರಿಗೆ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ. ಜೊತೆಗೆ 9 ನೇ ಶತಮಾನದ ಭೋಗ ನಂದೀಶ್ವರ ದೇವಸ್ಥಾನವನ್ನು ಧ್ವನಿ ಮತ್ತು ವಿಶೇಷ ವಿದ್ಯುತ್​ ದೀಪಗಳಿಂದ ಅಭಿವೃದ್ಧಿಪಡಿಸುತ್ತಿದ್ದೇವೆ. ಸುತ್ತಮುತ್ತಲಿನ ಪರಿಸರ ಮತ್ತು ಪರಂಪರೆಯನ್ನು  ಗಮನದಲ್ಲಿಟ್ಟುಕೊಂಡು ಈ ತಾಣವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್​ ಟೈಮ್ಸ್​ ಆಫ್​ ಇಂಡಿಯಾಗೆ ತಿಳಿಸಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ನಂದಿ ಹಿಲ್ಸ್ ತಪ್ಪಲಿನಲ್ಲಿ ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್!

ನಂದಿ ಬೆಟ್ಟವನ್ನು ಅಪಘಾತ ವಲಯವೆಂದು ಈಗಾಗಲೇ ಪರಿಗಣಿಸಲಾಗಿರುವುದರಿಂದ, ಹೊಸ ವರ್ಷ ಮತ್ತು ಇತರ ಪ್ರಮುಖ ರಜಾದಿನಗಳಲ್ಲಿ ಬೆಟ್ಟವನ್ನು ಸಾರ್ವಜನಿಕರ ಪ್ರವೇಶಕ್ಕೆ ಸಂಪರ್ಕಿಸುವ 2 ಕಿಮೀ ವ್ಯಾಪ್ತಿಯಲ್ಲಿ ಪೊಲೀಸರು ಈಗಾಗಲೇ ಬೈಕ್​​​ಗಳು ಮತ್ತು ನಾಲ್ಕು ಚಕ್ರದ ವಾಹನಗಳನ್ನು ನಿಷೇಧಿಸಿದ್ದಾರೆ.

ನಂದಿ ಬೆಟ್ಟವನ್ನು ಪ್ರವಾಸಿಗರಿಗೆ ಸುರಕ್ಷಿತ ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯೂ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲು ಮುಂದಾಗಿದೆ. ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್​ ಬಸ್​ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು