ಚಿಕ್ಕಬಳ್ಳಾಪುರ: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ(67) ವಿಧಿವಶರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮನೆಯಲ್ಲಿ ಬೆಳಗ್ಗೆ 6.45ಕ್ಕೆ ಹೃದಯಾಘಾತದಿಂದ ಕುಸಿದುಬಿದ್ದು ಜಿ.ವಿ.ಶ್ರೀರಾಮರೆಡ್ಡಿ ನಿಧನರಾಗಿದ್ದಾರೆ. ತಕ್ಷಣವೇ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಶ್ರೀರಾಮರೆಡ್ಡಿ ನಿಧನರಾಗಿರುವ ಬಗ್ಗೆ ಬೆಳಗ್ಗೆ 7.28ಕ್ಕೆ ವೈದ್ಯರು ಮಾಹಿತಿ ನೀಡಿದ್ದಾರೆ.
ಸಿಪಿಐಎಂ ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಇತ್ತೀಚೆಗೆ CPIM ಪಕ್ಷ ತೊರೆದು ತಮ್ಮದೆ ಪ್ರಜಾ ಸಂಘರ್ಷ ಸಮಿತಿ ಸ್ಥಾಪನೆ ಮಾಡಿದ್ರು. ಸಾಮಾಜಿಕ ಹೋರಾಟ ಆರಂಭಿಸಿದ್ದರು. ಸಮಾಜದ ಸುಧಾರಣೆಗಾಗಿ ತಮ್ಮನ್ನು ತಾವೇ ಅರ್ಪಿಸಿಕೊಂಡಿದ್ರು. ಜಿ.ವಿ.ಎಸ್ ನಿಧನದಿಂದ ಅಪಾರ ಬೆಂಬಲಿಗರಲ್ಲಿ ದುಃಖ ಮಡುಗಟ್ಟಿದೆ. ಆಸ್ಪತ್ರೆ ಬಳಿ ಬೆಂಬಲಿಗರು ಜಮಾಹಿಸುತ್ತಿದ್ದಾರೆ.
ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ವಿಧಿವಶ ಹಿನ್ನಲೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್ ರಮೇಶಕುಮಾರ್ ಪಾರ್ಥಿವ ಶರೀರ ದರ್ಶನ ಪಡೆದಿದ್ದಾರೆ. ಬಾಗೇಪಲ್ಲಿ ಪಟ್ಟಣಕ್ಕೆ ಆಗಮಿಸಿ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬಡವರ ಪರ ಸಮಾಜದ ಪರ ಇದ್ದ ಧ್ವನಿಯೊಂದು ನಿಂತು ಹೋಗಿದೆ. ನನಗೆ ಒಳ್ಳೆಯ ಸ್ನೇಹಿತರಾಗಿದ್ರು. ಎರಡು ಭಾರಿ ನನ್ನ ಜೊತೆ ಶಾಸಕರು ಆಗಿದ್ದರು. ಯಾರ ಹಂಗು ಇಲ್ಲದೆ ಬಡವರ ಪರ ಧ್ವನಿಯಾಗಿದ್ರು. ಎಲ್ಲಾ ಮಾರಾಟದ ವ್ಯವಸ್ಥೆ ಹಣದ ದುನಿಯಾದಲ್ಲಿ ಶ್ರೀರಾಮ್ ರೆಡ್ಡಿ ವಿಭಿನ್ನವಾಗಿದ್ರು. ಬಡವರ ಪರ ಮಾತನಾಡಲು ಯಾರು ಇದ್ದಾರೆ? ಅನ್ಯಾಯದ ಪರ ಜನರೇ ಮಾತನಾಡಲ್ಲ. ಈಗ ಶ್ರೀರಾಮ್ ರೆಡ್ಡಿ ಧ್ವನಿ ನಿಲ್ಲಿಸಿದ್ದಾರೆ ಎಂದು ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಇದನ್ನೂ ಓದಿ: SRH vs KKR, IPL 2022: ಗೆಲುವಿನ ಓಟ ಮುಂದುವರೆಸುತ್ತಾ ಹೈದರಾಬಾದ್?: ಕೆಕೆಆರ್ಗಿಂದು ಮತ್ತೊಂದು ಸವಾಲು
Published On - 8:33 am, Fri, 15 April 22