AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ; ಮೂವರ ಸ್ಥಿತಿ ಗಂಭೀರ, ಬಾಲಕ ಸಾವು

ಸದ್ಯ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಬಾಲಕ ಮುರಳಿ(14) ಸಾವನ್ನಪ್ಪಿದ್ದು, ಮಂಜುನಾಥ್(45), ಹನುಮಕ್ಕ(35), ಮನಿರಾಜು(20) ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ; ಮೂವರ ಸ್ಥಿತಿ ಗಂಭೀರ, ಬಾಲಕ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 19, 2021 | 1:22 PM

Share

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿಯಲ್ಲಿ ನಡೆದಿದೆ. ಮಕ್ಕಳಿಬ್ಬರಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಬಾಲಕ ಮುರಳಿ(14) ಸಾವನ್ನಪ್ಪಿದ್ದು, ಮಂಜುನಾಥ್(45), ಹನುಮಕ್ಕ(35), ಮನಿರಾಜು(20) ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಗ್ರಾಮ ವಾಸ್ತವ್ಯದಿಂದ ಹಿಂತಿರುಗುತ್ತಿದ್ದ ಅಧಿಕಾರಿ ಹೃದಯಾಘಾತದಿಂದ ಸಾವು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆಹಾರ ನಿರೀಕ್ಷಕ ಚಂದ್ರುನಾಯ್ಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡಿದ್ದ ಆಹಾರ ನಿರೀಕ್ಷಕ ಮೃತಪಟ್ಟಿದ್ದಾರೆ. ನಿನ್ನೆ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು ಇಂದು ವಾಪಸ್ಸಾಗುವ ವೇಳೆ ದಿಢೀರ್ ಹೃದಯಾಘಾತವಾಗಿದೆ. ಹೃದಯಾಘಾತವಾದ ಕೂಡಲೆ ಸಮೀಪದ ಆಸ್ಪತ್ರೆಗೆ ದಾಖಲಾಸಿದರು ಯಾವುದೇ ಪ್ರಯೋಜನವಾಗಿಲ್ಲ.

ಬೆಂಗಳೂರು: ಟ್ಯಾಂಕರ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ವೃದ್ಧ ಸಾವು ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸೊಸೆ ಜೋತೆ ಬೈಕ್​​ನಲ್ಲಿ ತೆರಳುತ್ತಿದ್ದ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದ್ವಿಚಕ್ರವಾಹನದಲ್ಲಿದ್ದ ನೆಲಮಂಗಲದ ಗಂಗಯ್ಯ(65) ಮೃತ ದುರ್ದೈವಿ. ಗಾಯಳು ಸೊಸೆ ವಿಜಯಲಕ್ಷ್ಮೀಯನ್ನು ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತದ ಬಳಿಕ ಟ್ಯಾಂಕರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಮಚ್ಚಿನಿಂದ ಹೊಡೆದು ವ್ಯಕ್ತಿ ಹತ್ಯೆ; ಆರೋಪಿ ಪರಾರಿ ಮಚ್ಚಿನಿಂದ ಹೊಡೆದು ವ್ಯಕ್ತಿಯೊರ್ವರನ್ನು ಕೊಲೆ ಮಾಡಿ, ಆರೋಪಿ ಪರಾರಿಯಾದ ಘಟನೆ ಕೋಲಾರ ತಾಲೂಕಿನ ವೇಮಗಲ್‌ ಗ್ರಾಮದಲ್ಲಿ ನಡೆದಿದೆ. ವೇಮಗಲ್ ಗ್ರಾಮದ ಸಿ‌ ಬ್ಲಾಕ್ ನಿವಾಸಿ ವೆಂಕಟೇಶ್ ಅಲಿಯಾಸ್ ವೆಂಕಿ(33) ಕೊಲೆಯಾದ ವ್ಯಕ್ತಿ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ವೇಮಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ಮಗಳ ಮದುವೆ ಮಾಡಿದ 15 ದಿನಕ್ಕೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನಾಲೆಯ ಎಂಜಿನಿಯರ್ ಕುಟುಂಬ

Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

Published On - 1:11 pm, Sun, 19 December 21

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್