ಚಿಕ್ಕಬಳ್ಳಾಪುರ, ಜ.03: ಜಿಲ್ಲೆಯ ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಕೌಟುಂಬಿಕ ಕಲಹ ಹಿನ್ನೆಲೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಶಂಕರಯ್ಯ, ಎರಡನೇ ಪತ್ನಿ ಶಾರದಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿ ಶಾರದಾ ತಾನೆ ಬೆಂಕಿ ಕಡ್ಡಿ ಗೀಚಿಕೊಂಡಿದ್ದಾಳೆ. ಈ ವೇಳೆ ಪತಿಗೂ ಬೆಂಕಿ ತಗುಲಿದ್ದು, ಶಾರದಾ ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನು ಈ ಶಂಕರಯ್ಯ ಅಕ್ಕ-ತಂಗಿಯರನ್ನೇ ಮದುವೆ ಮಾಡಿಕೊಂಡಿದ್ದ. ಹೊಟೇಲ್ ಜೊತೆ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಇತನ ಕುಟುಂಬದಲ್ಲಿ ಕಲಹ ಉಂಟಾಗಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿ್ಕ್ ಮಾಡಿ