AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಬಾಲಕಿಯರ ವಸತಿ ನಿಲಯಕ್ಕೆ ಬೀದಿ ಕಾಮಣ್ಣರ ಕಾಟ! ಹಾಸ್ಟೆಲ್ ಸಿಬ್ಬಂದಿಯ ವಿರುದ್ದ ಸ್ಥಳೀಯರ ಪ್ರತಿಭಟನೆ

ನಿರಾಶ್ರಿತರ ಮಕ್ಕಳು, ವಿದ್ಯಾರ್ಥಿನಿಯರು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಪ್ರತಿಷ್ಠಿತ ವಸತಿ ಶಾಲೆಯೊಂದು ಇದೆ, ಆದರೆ, ಅಲ್ಲಿರುವ ಬಾಲಕಿಯರಿಗೆ ಸೂಕ್ತ ರಕ್ಷಣೆಯಿಂದ ಹಿಡಿದು ಮೂಲಭೂತ ಸೌಕರ್ಯಗಳಿಲ್ಲ. ಕೆಲವು ಪುಂಡರುಗಳು ಲೇಡಿಸ್ ಹಾಸ್ಟೆಲ್​ನ್ನು ಲಾಡ್ಜಿಂಗ್ ಮಾಡಿಕೊಂಡಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ.

Chikkaballapur: ಬಾಲಕಿಯರ ವಸತಿ ನಿಲಯಕ್ಕೆ ಬೀದಿ ಕಾಮಣ್ಣರ ಕಾಟ! ಹಾಸ್ಟೆಲ್ ಸಿಬ್ಬಂದಿಯ ವಿರುದ್ದ ಸ್ಥಳೀಯರ ಪ್ರತಿಭಟನೆ
ಶಾಲೆ ಮುಖ್ಯಶಿಕ್ಷಕಿ, ಸ್ಥಳೀಯರ ಪ್ರತಿಭಟನೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 25, 2023 | 7:26 AM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ(Gudibande) ತಾಲೂಕು ಬೀಜಗಾನಹಳ್ಳಿ ಕಸ್ ಬಳಿ ಕಸ್ತೂರಿಬಾ ವಸತಿ ಶಾಲೆಯಿದೆ. ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಈ ವಸತಿ ಶಾಲೆ(School), ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗುವುದರ ಬದಲು, ಅನೈತಿಕ ಚಟುವಟಿಕೆ, ಅವ್ಯವಹಾರ, ಮೂಲಭೂತ ಸೌಕರ್ಯಗಳ ಕೊರತೆ ಸೇರಿ ಪುಂಡ ಪೊಕರಿಗಳ ಹಾವಳಿಗೆ ಕುಖ್ಯಾತಿಯಾಗಿದೆ. ಕೆಲವು ದಿನಗಳ ಹಿಂದೆ ಕೆಲವು ಯುವಕರು ಇಲ್ಲಿರುವ ಲೇಡಿಸ್ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ರಾಸಲೀಲೆ ಮಾಡಿರುವ ವಿಡಿಯೊಗಳು ಹರಿದಾಡಿ, ಪೋಷಕರಲ್ಲಿ ದೊಡ್ಡ ಆತಂಕ ಹುಟ್ಟು ಹಾಕುವಂತೆ ಮಾಡಿತ್ತು. ಆದರೂ ಕೂಡ ಕಸ್ತೂರಿಬಾ ವಸತಿ ಶಾಲೆಯಲ್ಲಿ ಯಾವುದೇ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ಸ್ಥಳೀಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲೆಯ ಶಿಕ್ಷಕರು ಹಾಗೂ ವಾರ್ಡನ್ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಯಾವುದೇ ಸಮಸ್ಯೆಯಿಲ್ಲವೆಂದ ಮುಖ್ಯಶಿಕ್ಷಕಿ

ಇನ್ನು ಕಸ್ತೂರಿಬಾ ವಸತಿ ಶಾಲೆ ನೇರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಕರು ವಾರ್ಡನ್​ಗಳು ರಾತ್ರಿಯಾದರೆ, ವಸತಿ ಶಾಲೆಯಲ್ಲಿ ಇರಲ್ಲ. ಶಾಲೆ ಹಾಗೂ ಹಾಸ್ಟೆಲ್ ಸುತ್ತ ಸ್ಮಶಾನ, ಅರಣ್ಯ ಇದೆ. ಸೂಕ್ತ ಕಂಪೌಂಡ್ ವ್ಯವಸ್ಥೆಯಿಲ್ಲ. ಯಾರು ಬೇಕಾದರೂ ಬರಬಹುದು. ಇಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಶಾಲೆಯ ಮುಖ್ಯಶಿಕ್ಷಕಿ ಮಂಜುಳಾ ಅವರನ್ನು ಕೇಳಿದರೆ, ಎಲ್ಲವೂ ಸರಿಯಾಗಿಯೇ ಇದೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:10 ವರ್ಷ ಹಿಂದೆಯೇ ಶಿಕ್ಷಕರಿಗಾಗಿ ಹೈಟೆಕ್ ಗುರು ಭವನ ನಿರ್ಮಿಸಿದರು! ಆದರೆ ಅಲ್ಲಿ ಯಾರೂ ವಾಸಿಸುತ್ತಿಲ್ಲ, ಶಿಕ್ಷಣಾಧಿಕಾರಿಗಳು ಮಾತ್ರ ನಿದ್ರಿಸುತ್ತಿದ್ದಾರೆ!

ಒಟ್ಟಿನಲ್ಲಿ ಕಡು ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರ ಸರ್ವ ಶಿಕ್ಷಣ ಅಭಿಯಾನದಡಿ ನೇರವಾಗಿ ವಸತಿ ಶಾಲೆ ಆರಂಭಿಸಿದರೆ. ನಿಲಯ ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷ್ಯದಿಂದ ಪ್ರತಿಷ್ಠಿತ ಸರ್ಕಾರಿ ಕಸ್ತೂರಿಬಾ ವಸತಿ ಶಾಲೆ ಬೇರೆ ಬೇರೆ ಕಾರಣಗಳಿಗೆ ಕುಖ್ಯಾತಿಯಾಗುತ್ತಿರುವುದು ಮಾತ್ರ ವಿಪರ್ಯಾಸವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್