ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಸದಸ್ಯೆ ಅಪಹರಣ ಆರೋಪ
Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಗ್ರಾಮದಲ್ಲಿ ನಾಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಇಂದು ಜೆಡಿಎಸ್ ಬೆಂಬಲಿತ ಸದಸ್ಯರುಗಳಿಂದ ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯೆ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರ, ಆಗಸ್ಟ್ 04: ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಗ್ರಾಮದಲ್ಲಿ ನಾಳೆ ಗ್ರಾಮ ಪಂಚಾಯಿತಿ (Gram panchayat) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದೆ. ಹಾಗಾಗಿ ಜೆಡಿಎಸ್ ಬೆಂಬಲಿತ ಸದಸ್ಯರುಗಳಿಂದ ಅಪಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯೆ ರೇಷ್ಮಾ ಆರೋಪಿಸಿದ್ದಾರೆ. ಅಪಹರಣಕ್ಕೊಳಗಾದ ಸದಸ್ಯೆಯ ಗಂಡ ಪಯಾಜ್ ಪಾಷರಿಂದ ಚಿಂತಾಮಣಿ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
ಜೆಡಿಎಸ್ ಬೆಂಬಲಿತ ಸದಸ್ಯರಾದ ದೊಡ್ಡಬೊಮ್ಮನಹಳ್ಳಿಯ ವೆಂಕಟರೆಡ್ಡಿ, ಕೋಡಿಹಳ್ಳಿ ಶಿವಾರೆಡ್ಡಿ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: ಮಾತನಾಡುವಾಗ ಖಂಡ್ರೆ ಬದಲು ಖರ್ಗೆ ಅಂತಾ ಹೇಳಿದ್ದೇನೆ: ಆರಗ ಜ್ಞಾನೇಂದ್ರ
ಜಿದ್ದಾಜಿದ್ದಿಗೆ ಕಾರಣವಾದ ಲೋಕಲ್ ಕದನ: ಚೀಟಿ ಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ
ಯಾದಗಿರಿ: ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಲೋಕಲ್ ಕದನ ಭಾರೀ ಜಿದ್ದಾಜಿದ್ದಿ ಕಾರಣವಾಗಿದೆ. ಚೀಟಿ ಎತ್ತುವ ಮೂಲಕ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ. ಆ ಮೂಲಕ ವಿಚಿತ್ರ ಫಲಿತಾಂಶಕ್ಕೆ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮ ಪಂಚಾಯತಿ ಚುನಾವಣೆ ಸಾಕ್ಷಿಯಾಗಿದೆ.
ಇದನ್ನೂ ಓದಿ: ಎಸ್ಸಿಪಿ, ಟಿಎಸ್ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ
ಒಟ್ಟು 19 ಜನ ಸದಸ್ಯರಿಂದ ಮತ ಚಲಾವಣೆ ಮಾಡಲಾಗಿದೆ. ಆದರೆ ಅದರಲ್ಲಿ ಒಂದು ಮತ ಅಸಿಂಧುಗೊಂಡಿದೆ. ಆ ಒಂದು ಅಸಿಂಧು ಮತದಿಂದಾಗಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ,ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ.
ಈ ಪ್ರಕ್ರಿಯೆ ನಡೆಯುವ ಮಾಧ್ಯೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಗ್ರಾಮದಲ್ಲಿ ಬೀಡುಬಿಟ್ಟದ್ದರು. ತಕ್ಷಣ ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಕಳೆದ ತಿಂಗಳು ಇದೇ ಪಂಚಾಯತಿಯ ಇಬ್ಬರು ಸದಸ್ಯರು ನಾಪತ್ತೆಯಾಗಿದ್ದರು. ಮೂರು ದಿನಗಳ ಬಳಿಕ ಪತ್ತೆಯಾಗಿದ್ದರು. ಬಳಿಕ ಘಟನೆ ಸುಖಾಂತ್ಯಗೊಂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:15 pm, Fri, 4 August 23