ಚಿಕ್ಕಬಳ್ಳಾಪುರದಲ್ಲಿ ಮೆಗಾ ಆರೋಗ್ಯ ಮೇಳ ಆಯೋಜನೆ, ಒಂದೇ ಸೂರಿನಡಿ ಎಲ್ಲಾ ಆರೋಗ್ಯ ವ್ಯವಸ್ಥೆ, ಲಕ್ಷಾಂತರ ಮಂದಿಗೆ ಉಚಿತ ತಪಾಸಣೆ ಚಿಕಿತ್ಸೆಗೆ ಸಿದ್ಧತೆ

ಚಿಕ್ಕಬಳ್ಳಾಪುರದಲ್ಲಿ ಮೆಗಾ ಆರೋಗ್ಯ ಮೇಳ ಆಯೋಜನೆ, ಒಂದೇ ಸೂರಿನಡಿ ಎಲ್ಲಾ ಆರೋಗ್ಯ ವ್ಯವಸ್ಥೆ, ಲಕ್ಷಾಂತರ ಮಂದಿಗೆ ಉಚಿತ ತಪಾಸಣೆ ಚಿಕಿತ್ಸೆಗೆ ಸಿದ್ಧತೆ
ಚಿಕ್ಕಬಳ್ಳಾಪುರ ಆರೋಗ್ಯ ಮೇಳ

ಚಿಕ್ಕಬಳ್ಳಾಪುರದಲ್ಲಿ ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಆಯೋಜನೆ. ಒಂದೇ ಸೂರಿನಡಿ ಆರೋಗ್ಯ ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದೆ.

TV9kannada Web Team

| Edited By: Vivek Biradar

May 13, 2022 | 6:02 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ (Chikkaballapur) ಆಯೋಜನೆಯಾಗಿರುವ ಮೆಗಾ ಆರೋಗ್ಯ ಮೇಳ ಹೊಸ ವಿಶ್ವದಾಖಲೆ ಸೃಷ್ಟಿಸಲಿದೆ. ಒಂದೇ ಸೂರಿನಡಿ ಆರೋಗ್ಯ (Health) ಸಂಬಂಧಿತ ಎಲ್ಲಾ ವ್ಯವಸ್ಥೆಗಳು ದೊರೆಯಲಿದ್ದು, 1.25 ಜನರು ನೋಂದಣಿಯಾಗಿದ್ದು 1.5 ಲಕ್ಷ ಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ (Dr. K Sudhakar) ಅವರು ಹೇಳಿದರು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಸಂಸ್ಥೆಯ sjcit engineering college ಆವರಣದಲ್ಲಿ ಮೆಗಾ ಆರೋಗ್ಯ ಮೇಳದ ಅಂತಿಮ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಗೂ ಡಾ. ಕೆ. ಸುಧಾಕರ್ ಫೌಂಡೇಷನ್ ಸೇರಿಕೊಂಡು ಈ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಿದೆ. ಮೇ 14 ಮತ್ತು 15ರಂದು ಈ ಮೇಳ ನಡೆಯಲಿದ್ದು, 1.5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿ ಆರೋಗ್ಯ ಸೇವೆ ಪಡೆಯುವ ನಿರೀಕ್ಷೆ ಇದೆ ಎಂದರು.

ಬೃಹತ್ ಆರೋಗ್ಯ ಮೇಳಕ್ಕೆ ಈಗಾಗಲೇ 1.25 ಲಕ್ಷ ಜನರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳದಲ್ಲೇ ನೋಂದಣಿಗೆ ಅವಕಾಶವಿದ್ದು ಅದಕ್ಕಾಗಿ ಸುಮಾರು 50 ಕೌಂಟರ್ ಗಳನ್ನು ಕೂಡ ತೆರೆಯಲಾಗಿದೆ. ಈ ಹಿಂದೆ 73,000 ಜನರು ಒಂದೇ ಜಾಗದಲ್ಲಿ ನಡೆದ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ದಾಖಲೆ ಇದೆ. ಆದರೆ ಚಿಕ್ಕಬಳ್ಳಾಪುರದ ಈ ಆರೋಗ್ಯ ಮೇಳದ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

2 ದಿನಗಳ ಕಾಲ ನಡೆಯುವ ಈ ಆರೋಗ್ಯ ಮೇಳದಲ್ಲಿ ಒಂದೇ ಸೂರಿನಡಿ ತಪಾಣೆ, ಚಿಕಿತ್ಸೆ ಸೇರಿ ಎಲ್ಲವೂ ಉಚಿತವಾಗಿ ಸಿಗಲಿದೆ. ಅಷ್ಟೇ ಅಲ್ಲದೆ ಶಸ್ತ್ರ ಚಿಕಿತ್ಸೆಯ ಅನಿವಾರ್ಯತೆ ಇದ್ದರೆ ಅಂತಹವರನ್ನು ಸೂಕ್ತ ಆಸ್ಪತ್ರೆಗೆ ಅಥವಾ ವೈದ್ಯಕೀಯ ಸಂಸ್ಥೆಗೆ ರೆಫರ್ ಮಾಡಿ, ಅವರಿಗೆ ಚಿಕಿತ್ಸೆ ಕೊಡಿಸಿ ಅವರನ್ನು ಮತ್ತೆ ಮನೆಗೆ ತರುವ ವ್ಯವಸ್ಥೆ ಮಾಡಲಾಗುವುದು. ಇದು ನೋಡುವವರ ಕಣ್ಣಿಗೆ ನಡೆಯುವ ಆರೋಗ್ಯ ಮೇಳವಲ್ಲ. ಬದಲಾಗಿ ಇದರ ಲಾಭ ಸಂಪೂರ್ಣವಾಗಿ ಜನರಿಗೆ ಸಿಗಬೇಕು ಅನ್ನುವ ಉದ್ದೇಶದಿಂದ ನಡೆಯುವ ಕಾರ್ಯಕ್ರಮ ಎಂದು ಹೇಳಿದರು.

ಈ ಆರೋಗ್ಯ ಮೇಳದಲ್ಲಿ 2 ಸಾವಿರಕ್ಕೂ ಹೆಚ್ಚು ವೈದ್ಯರು ಭಾಗವಹಿಸಲಿದ್ದಾರೆ. ಈ ಪೈಕಿ 500ಕ್ಕೂ ಅಧಿಕ ಪರಿಣಿತ ವೈದ್ಯರು ಇರಲಿದ್ದಾರೆ. 2,500ಕ್ಕೂ ಅಧಿಕ ನರ್ಸಿಂಗ್ ಅಫೀಷಿಯಲ್ಸ್, ಆಶಾ ಕಾರ್ಯಕರ್ತರು, ತಾಂತ್ರಿಕ ವರ್ಗದವರು, ಹಿರಿಯ ಅಧಿಕಾರಿಗಳು ಈ ಮೇಳದ ಯಶಸ್ಸಿಗೆ ಶ್ರಮಿಸಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಜನರು ಮೇಳದ ಸದುಪಯೋಗ ಮಾಡಿಕೊಳ್ಳುವಂತೆ ಮನವಿ‌ ಮಾಡಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us on

Related Stories

Most Read Stories

Click on your DTH Provider to Add TV9 Kannada