ಚಿಕ್ಕಬಳ್ಳಾಪುರ: ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರು ರಾಜೀನಾಮೆ ನೀಡಲು ನಾನೇ ಪ್ರೋತ್ಸಾಹ ಮಾಡಿದ್ದೆ, ಇದನ್ನು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹೇಳಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಉಪಚುನಾವಣೆ ಪ್ರಚಾರದ ವೇಳೆ ಅವರು ವಿಷಯ ಬಹಿರಂಗಪಡಿಸಿದರು.
17 ಜನ ಬುದ್ಧಿವಂತರಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ
ಸುಧಾಕರ್‌ರಂತಹ 17 ಶಾಸಕರಿಂದ ಬಿಜೆಪಿ ಸರ್ಕಾರ ಬಂತು. ಹೆಚ್‌ಡಿಕೆ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ, ಡಿಸಿಎಂ ಮತ್ತೋರ್ವ ಸೂಪರ್ ಸಿಎಂರನ್ನು ನೋಡಬೇಕಾಯಿತು. ಅವರಿಗೆ ರಾಜ್ಯದ ಅಭಿವೃದ್ಧಿಗಿಂತ ಅವರ ಉಳಿವೇ ಹೆಚ್ಚಾಗಿತ್ತು. 17 ಜನ ಬುದ್ಧಿವಂತರಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಾರೆ ಎಂದು ಮಂಚೇನಹಳ್ಳಿಯಲ್ಲಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.