ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ

Chikkaballapura news: ಚಿಕ್ಕಬಳ್ಳಾಪುರದಲ್ಲಿ ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆದರೂ ಆರ್​ಟಿಒ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.

ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ
ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿದ್ದ ಟಿಪ್ಪರ್​ಗಳನ್ನು ವಶಕ್ಕೆ ಪಡೆದ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು
Follow us
Rakesh Nayak Manchi
|

Updated on: Jun 19, 2023 | 10:48 PM

ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ (Chikkaballapura) ಬೆಳಕಿಗೆ ಬಂದಿದ್ದು, ಆರ್​​ಟಿಒ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಉತ್ಪನ್ನಗಳನ್ನು ಟಿಪ್ಪರ್​ನಲ್ಲಿ ಓವರ್​ಲೋಡ್ ಸಾಗಿಸುತ್ತಿದ್ದರೂ ಪರಿಶೀಲಿಸದ ಸಿಬ್ಬಂದಿ ಅಕ್ರಮ ಗಣಿ ಸಾಗಾಟಕ್ಕೆ ಸಾಥ್ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಕಳ್ಳಾಟ ಬಯಲಾಗಿದೆ.

ಭೂವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಟಿಪ್ಪರ್​​ಗಳ ಮಿತಿಗಿಂತ ಹೆಚ್ಚಿಗೆ ಗಣಿ ಉತ್ಪನ್ನಗಳ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಡೆದ ಪರ್ಮಿಟ್​ಗಿಂತ ಹೆಚ್ಚುವರಿಯಾಗಿ ಗಣಿ ಉತ್ಪನ್ನಗಳ ಸಾಗಿಸುತ್ತಿರುವ ಟಿಪ್ಪರ್​ಗಳ ವಿರುದ್ಧ ಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur:ಇದ್ದಕ್ಕಿದ್ದಂತೆ ಕೆರೆಯಲ್ಲಿ ಸಾವನ್ನಪ್ಪಿದ ಮೀನುಗಳು; ಕೆರೆಗೆ ವಿಷ ಪ್ರಾಶನವೊ? ನೀರೇ ವಿಷವಾಯಿತಾ? ಅನ್ನೊ ಅನುಮಾನ!

ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮ ಗಣಿಗಾರಿಕೆ ಹಿನ್ನೆಲೆ 10ಕ್ಕೂ ಹೆಚ್ಚು ಕಲ್ಲು ಹಾಗೂ ಕಲ್ಲಿನ ಉತ್ಪನ್ನ ಸಾಗಿಸುತ್ತಿದ್ದ ಲಾರಿಗಳನ್ನು ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿ ಕೃಷ್ಣವೇಣಿ ನೇತೃತ್ವದಲ್ಲಿ ದಾಳಿ ನಡೆಸಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕಲ್ಲಿನ ಉತ್ಪನ್ನಗಳನ್ನು ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗೇಟ್​ ಬಳಿ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ