ಚಿಕ್ಕಬಳ್ಳಾಪುರ, ಸೆ.25: ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ತಾಲೂಕಿನ ಅವಲಗುರ್ಕಿ ಗ್ರಾಮದ ನಿತಿಶ್(17), ನಿತಿನ್(17) ಹಾಗೂ ವೈಭವ್ ಮೃತರು. ನಿತಿಶ್ ಹಾಗೂ ನಿತಿನ್ ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ವೈಭವ್ ಗುಡ್ ಶೆರ್ಡ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಮೂವರು ಟ್ಯೂಷನ್ ಮುಗಿಸಿಕೊಂಡು ಒಂದೇ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಇಡೂರು ಸಮೀಪದ ಜನ್ನಾಲ್ ಬಳಿ ಖಾಸಗಿ ಬಸ್ಗೆ ಮೆಣಸು ಸಾಗಾಟದ ಪಿಕಪ್ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್ ಪಲ್ಟಿಯಾಗಿ ಐವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಗೊಂಡವರಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಗಾಯಗೊಂಡವರು. ರಾಘವೇಂದ್ರ ಹಾಗೂ ವಾಸಿಂ ಪಿಕ್ ಆಫ್ ನಲ್ಲಿದ್ದರೇ, ಉಳಿದವರು ಬಸ್ಸಿನಲ್ಲಿದ್ದರು. ಅಪಘಾತದ ಪರಿಣಾಮ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು,
ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಮಂಡ್ಯ: ನಿಯಂತ್ರಣ ತಪ್ಪಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದ್ದೂರು ತಾಲ್ಲೂಕಿನ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಬೋಲೋರೊ ವಾಹನ ಪಲ್ಟಿಯಾಗಿದ್ದು, ಚಾಲಕ ಹಾಗೂ ಕ್ಲೀನರ್ಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬೋಲೋರೋ ವಾಹನ, ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಡಿವೈಡರ್ ಮೇಲೆ ನಿಂತಿದೆ.
ಗಾಯಾಳುಗಳನ್ನು ಕೂಡಲೇ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮದ್ದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ 10ನೇ ವಾರ್ಡ್ನಲ್ಲಿ ನಡೆದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎತ್ತು ಗುದ್ದಿ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ನಂದಾ ಓಂಕಾರಿ ಹಾಗೂ ಗಿರೀಜಾ ಕೊಟ್ಟಗಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:30 pm, Wed, 25 September 24