ಚಿಕ್ಕಬಳ್ಳಾಪುರ: ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ದಾರುಣ ಸಾವು

ಅವರು ಅಕ್ಕ-ತಮ್ಮ, ಅವರ ತಾಯಿ ನಾಲ್ಕು ತಿಂಗಳ ಹಿಂದೆ ಅನಾರೋಗ್ಯದಿಂದ ಸಾವಿನ ಮನೆ ಸೇರಿದ್ರು, ತಾಯಿ ಸತ್ತ ನೋವಿನಲ್ಲಿ ಆಕೆಯ ಇಬ್ಬರು ಮಕ್ಕಳು ಜಿಗುಪ್ಸೆಗೊಂಡಿದ್ರು. ಆದ್ರೆ, ಸೂಕ್ತ ಚಿಕಿತ್ಸೆ ಪಡೆಯುವುದರ ಬದಲು, ಚಲಿಸುವ ರೈಲಿಗೆ ಸಿಲುಕಿ ಅಣ್ಣ-ತಂಗಿ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ದಾರುಣ ಸಾವು
ಶಿಡ್ಲಘಟ್ಟ ನಗರದ ಬಳಿ ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ದಾರುಣ ಸಾವು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 02, 2024 | 4:21 PM

ಚಿಕ್ಕಬಳ್ಳಾಪುರ, ಆ.02: ರೈಲಿಗೆ ತಲೆಕೊಟ್ಟು ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ಬಳಿ ನಡೆದಿದೆ. ಪ್ರಭು(25) ಹಾಗೂ ತಂಗಿ ನವ್ಯಾ(23) ಆತ್ಮಹತ್ಯೆ ಶರಣಾದವರು. ಮೃತರು ಶಿಡ್ಲಘಟ್ಟ ನಗರದ ಪ್ರೇಮನಗರ ನಿವಾಸಿಗಳಾಗಿದ್ದು, ಇತ್ತೀಚೆಗೆ ಮೃತರ ತಾಯಿ ನಿಧನರಾಗಿದ್ದರು. ಇದರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ತಾಯಿ ಲಲಿತಮ್ಮ ಅಫೆಂಡೆಕ್ಸ್ ಕಾಯಿಲೆಯಿಂದ ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ರು. ತಂದೆ ನಟರಾಜ್ ಅಮಾಯಕನಾಗಿದ್ದು, ಕೂಲಿ-ನಾಲಿ ಕೆಲಸ ಮಾಡಿಕೊಂಡು ಮಕ್ಕಳನ್ನು ಪೋಷಣೆ ಮಾಡುತಿದ್ದ. ಆದ್ರೆ, ತಾಯಿ ತನ್ನ ಇಬ್ಬರು ಮಕ್ಕಳಿಗೆ ಪ್ರಪಂಚ ತೋರಿಸದೆ, ಮನೆಯಲ್ಲಿ ಕೂಡಿ ಹಾಕಿ ಬೆಳೆಸಿದ್ದಳಂತೆ. ಇನ್ನು ತಾಯಿಯೆ ಎಲ್ಲಾ ಆಗಿದ್ದ ಮಕ್ಕಳಿಗೆ, ತಾಯಿ ಇಲ್ಲದಿರುವುದನ್ನು ಸಹಿಸಿಕೊಳ್ಳಲಾಗಿಲ್ಲ.

ಇದನ್ನೂ ಓದಿ:ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಇದರಿಂದ ಮನನೊಂದು ರೈಲಿಗೆ ಇಬ್ಬರು ಬಲಿಯಾಗಿದ್ದು, ಸುದ್ದಿ ತಿಳಿದ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 2 August 24

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು