AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ

ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಸಿದ್ದರಾಮಯ್ಯನವರು ಬಾಗೇಪಲ್ಲಿಗೆ ಬಂದರೆ ಕ್ಷೇತ್ರ ಅಭಿವೃದ್ಧಿಯಾಗುತ್ತೆ ಎಂದು ಸುಬ್ಬಾರೆಡ್ಡಿ ತಿಳಿಸಿದರು.

ವಿಧಾನಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: sandhya thejappa|

Updated on:Jul 24, 2022 | 10:39 AM

Share

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ (Assembly Election) ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಇದೆ. ಈ ನಡುವೆ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂಗೆ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಹ್ವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಸುಬ್ಬಾರೆಡ್ಡಿ, ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಸಿದ್ದರಾಮಯ್ಯನವರು ಬಾಗೇಪಲ್ಲಿಗೆ ಬಂದರೆ ಕ್ಷೇತ್ರ ಅಭಿವೃದ್ಧಿಯಾಗುತ್ತೆ ಎಂದು ತಿಳಿಸಿದರು.

ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ: ರಾಯಚೂರು ಜಿಲ್ಲಾ ಕಾಂಗ್ರೆಸ್​ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಲಿಂಗಸಗೂರು ಕ್ಷೇತ್ರದ ಕಾಂಗ್ರೆಸ್ಶಾಸಕ ಡಿ.ಎಸ್.ಹೂಲಗೇರಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಕಾರ್ಯಕರ್ತರನ್ನು ಕಡೆಗಣಿಸುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಇತ್ತೀಚೆಗೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಬಳಿ ಕಾರ್ಯಕರ್ತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Neeraj Chopra: ವಿಶ್ವ ಚಾಂಪಿಯನ್​​ಶಿಪ್​ನಲ್ಲಿ ಬೆಳ್ಳಿ: ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರ

ಇದನ್ನೂ ಓದಿ
Image
ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್​ ಮೇಲೆ ಪೊಲೀಸ್ ದಾಳಿ: 73 ಮಂದಿಯ ಬಂಧನ, ವೇಶ್ಯಾವಟಿಕೆ ಆರೋಪ
Image
ಹೊಸಪೇಟೆಗೆ ಬಂದು ಮಧ್ಯರಾತ್ರಿ ಪುನೀತ್​ ಪುತ್ಥಳಿಗೆ ನಮಿಸಿದ ಯುವ ರಾಜ್​ಕುಮಾರ್​
Image
ಗಾಂಜಾ ಮತ್ತಲ್ಲಿ ದರೋಡೆ: ರಾಬರಿ‌ ಮಾಡಿದ ಹಣದಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪ್ರಾಯಶ್ಚಿತ
Image
ಜಮೀರ್ vs ಡಿಕೆಶಿ: ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ಅಹಮದ್ ಹೇಳಿಕೆಗೆ ಆದಿಚುಂಚನಗಿರಿ ಶ್ರೀಗಳಿಂದ ತೀವ್ರ ಆಕ್ಷೇಪ

ಇಬ್ಬರು ಶಾಸಕರ ಕಾರ್ಯಕರ್ತರ ನಡುವೆ ಗಲಾಟೆ: ಗ್ರಾಮದೇವತೆ ಜಾತ್ರೆಯ (Fair) ಫ್ಲೆಕ್ಸ್​ ಕಟ್ಟುವ ವಿಚಾರಕ್ಕೆ ಇಬ್ಬರು ಶಾಸಕರ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಘಟನೆ ತುಮಕೂರು (Tumkur) ತಾಲೂಕಿನ ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದಿದೆ. ಇನ್ನು ಮಾಜಿ ಶಾಸಕ ಸುರೇಶ್​​ಗೌಡ ಬೆಂಬಲಿಗರು ಗೌರಿಶಂಕರ್ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಜೆಡಿಎಸ್​ ಕಾರ್ಯಕರ್ತ ಸಿರಾಜ್ ಸೇರಿದಂತೆ ಇಬ್ಬರಿಗೆ ಗಾಯವಾಗಿದ್ದು, ಬಿಜೆಪಿಯ ಉಮೇಶ್, ಚಂದ್ರು ಸೇರಿ ಹಲವರಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳು ಸಿರಾಜ್ ಸೇರಿದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: Monsoon Diet: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಣ್ಣುಗಳಿವು

Published On - 10:32 am, Sun, 24 July 22