ವಿಧಾನಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ

| Updated By: sandhya thejappa

Updated on: Jul 24, 2022 | 10:39 AM

ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಸಿದ್ದರಾಮಯ್ಯನವರು ಬಾಗೇಪಲ್ಲಿಗೆ ಬಂದರೆ ಕ್ಷೇತ್ರ ಅಭಿವೃದ್ಧಿಯಾಗುತ್ತೆ ಎಂದು ಸುಬ್ಬಾರೆಡ್ಡಿ ತಿಳಿಸಿದರು.

ವಿಧಾನಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ (Assembly Election) ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಇದೆ. ಈ ನಡುವೆ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂಗೆ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಹ್ವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಸುಬ್ಬಾರೆಡ್ಡಿ, ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಸಿದ್ದರಾಮಯ್ಯನವರು ಬಾಗೇಪಲ್ಲಿಗೆ ಬಂದರೆ ಕ್ಷೇತ್ರ ಅಭಿವೃದ್ಧಿಯಾಗುತ್ತೆ ಎಂದು ತಿಳಿಸಿದರು.

ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ:
ರಾಯಚೂರು ಜಿಲ್ಲಾ ಕಾಂಗ್ರೆಸ್​ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಲಿಂಗಸಗೂರು ಕ್ಷೇತ್ರದ ಕಾಂಗ್ರೆಸ್ಶಾಸಕ ಡಿ.ಎಸ್.ಹೂಲಗೇರಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಕಾರ್ಯಕರ್ತರನ್ನು ಕಡೆಗಣಿಸುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಇತ್ತೀಚೆಗೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಬಳಿ ಕಾರ್ಯಕರ್ತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Neeraj Chopra: ವಿಶ್ವ ಚಾಂಪಿಯನ್​​ಶಿಪ್​ನಲ್ಲಿ ಬೆಳ್ಳಿ: ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರ

ಇದನ್ನೂ ಓದಿ
ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್​ ಮೇಲೆ ಪೊಲೀಸ್ ದಾಳಿ: 73 ಮಂದಿಯ ಬಂಧನ, ವೇಶ್ಯಾವಟಿಕೆ ಆರೋಪ
ಹೊಸಪೇಟೆಗೆ ಬಂದು ಮಧ್ಯರಾತ್ರಿ ಪುನೀತ್​ ಪುತ್ಥಳಿಗೆ ನಮಿಸಿದ ಯುವ ರಾಜ್​ಕುಮಾರ್​
ಗಾಂಜಾ ಮತ್ತಲ್ಲಿ ದರೋಡೆ: ರಾಬರಿ‌ ಮಾಡಿದ ಹಣದಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪ್ರಾಯಶ್ಚಿತ
ಜಮೀರ್ vs ಡಿಕೆಶಿ: ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ಅಹಮದ್ ಹೇಳಿಕೆಗೆ ಆದಿಚುಂಚನಗಿರಿ ಶ್ರೀಗಳಿಂದ ತೀವ್ರ ಆಕ್ಷೇಪ

ಇಬ್ಬರು ಶಾಸಕರ ಕಾರ್ಯಕರ್ತರ ನಡುವೆ ಗಲಾಟೆ:
ಗ್ರಾಮದೇವತೆ ಜಾತ್ರೆಯ (Fair) ಫ್ಲೆಕ್ಸ್​ ಕಟ್ಟುವ ವಿಚಾರಕ್ಕೆ ಇಬ್ಬರು ಶಾಸಕರ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಘಟನೆ ತುಮಕೂರು (Tumkur) ತಾಲೂಕಿನ ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದಿದೆ. ಇನ್ನು ಮಾಜಿ ಶಾಸಕ ಸುರೇಶ್​​ಗೌಡ ಬೆಂಬಲಿಗರು ಗೌರಿಶಂಕರ್ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಜೆಡಿಎಸ್​ ಕಾರ್ಯಕರ್ತ ಸಿರಾಜ್ ಸೇರಿದಂತೆ ಇಬ್ಬರಿಗೆ ಗಾಯವಾಗಿದ್ದು, ಬಿಜೆಪಿಯ ಉಮೇಶ್, ಚಂದ್ರು ಸೇರಿ ಹಲವರಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳು ಸಿರಾಜ್ ಸೇರಿದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: Monsoon Diet: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಣ್ಣುಗಳಿವು

Published On - 10:32 am, Sun, 24 July 22