ಐಟಿ ದಾಳಿ: 4.8 ಕೋಟಿ ಜಪ್ತಿ, ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ಮನೆಯಲ್ಲಿ ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣ ಸಂಬಂಧ ಡಾ. ಕೆ ಸುಧಾಕರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಐಟಿ ದಾಳಿ: 4.8 ಕೋಟಿ ಜಪ್ತಿ, ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲು
ಕೆ ಸುಧಾಕರ್​
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on: Apr 27, 2024 | 7:35 AM

ನೆಲಮಂಗಲ, ಏಪ್ರಿಲ್​ 27: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ (K Sudhakar) ವಿರುದ್ಧ ಎಸ್​ಎಸ್​ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿ, 4.82 ಕೋಟಿ ಹಣವನ್ನು ಜಪ್ತಿ ಮಾಡಿದರು.

ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದಾರೆ. ಅಲ್ಲದೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್​ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ.

ಈ ವಿಚಾರವನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಎಸ್​ಎಸ್​ಟಿ ತಂಡದ ಮುಖ್ಯಸ್ಥ ದಶರಥ್​ .ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನ ಮಾಡಿದ್ದಕ್ಕಾಗಿ RP ಕಾಯಿದೆ 1951ರ ಅಡಿಯಲ್ಲಿ ಸೆಕ್ಷನ್ 171ಇ (ಲಂಚ ಸ್ವೀಕಾರ), 171ಎಫ್​ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರುವಿಕೆ) 171ಬಿ (ಮತದಾರರಿಗೆ ಹಣದ ಆಮಿಷ), 171ಸಿ (ಚುನಾವಣೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಸ್ತಕ್ಷೇಪ) ಆರೋಪದಡಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಡಿಕೆ ಸುರೇಶ್​ ಆಪ್ತ, ಮಾಜಿ ಕಾರ್ಪೊರೇಟರ್ ಮನೆ ಮೇಲೆ ಐಟಿ ದಾಳಿ; ‘ಕೈ’ ಕಾರ್ಯಕರ್ತರಿಂದ ಧರಣಿ 

ದಾಳಿ ನಡೆದಿದ್ದು ಹೇಗೆ?

ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಶುಕ್ರವಾರ (ಏಪ್ರಿಲ್ 25) ರಂದು ದಾಳಿ ಮಾಡಿದ್ದರು. 10 ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದರು. ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿತ್ತು. ಕೂಡಲೇ ಐಟಿ ಸಿಬ್ಬಂದಿ ಹಣ ಎಣಿಕೆ ಮೆಷಿನ್ ಹಾಗೂ ಚಿನ್ನಭರಣ ತೂಕದ ಮೆಷಿನ್ ತಗೆದುಕೊಂಡು ಬಂದು ಎಣಿಕೆ ಮಾಡಿದ್ದು, ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ