AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ

ಬೆಂಗಳೂರು ಗ್ರಾಮಾಂತರದಲ್ಲಿ 17 ವರ್ಷದ ಕಲ್ಯಾಣಿ ನಿಗೂಢ ಸಾವನ್ನಪ್ಪಿದ್ದು, ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಜಿಲ್ಲೆ ದಾಟಿ ಸಾಗಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಚಿಕ್ಕಬಳ್ಳಾಪುರದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಾಗ ಪೊಲೀಸರು ತಡೆದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದು ಆಕಸ್ಮಿಕ ಸಾವೋ ಅಥವಾ ಬೇರೆಯದ್ದೇ ಕಾರಣವಿದೆಯೋ ಎಂಬ ಬಗ್ಗೆ ಜಂಟಿ ತನಿಖೆ ನಡೆಯುತ್ತಿದೆ.

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
ಕಲ್ಯಾಣಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 10, 2026 | 7:16 PM

Share

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶವವನ್ನು ನೇರವಾಗಿ ಚಿಕ್ಕಬಳ್ಳಾಪುರ ತಾಲೂಕಿನ ಈತಮಾಕಲಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ.

ಇನ್ನೇನು ಶವ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದಾಗ, ವಿಷಯ ತಿಳಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಸ್ಕಾರವನ್ನು ನಿಲ್ಲಿಸಿದ್ದಾರೆ. ಸ್ಮಶಾನ ಸೇರಬೇಕಿದ್ದ ಶವವನ್ನು ಪೊಲೀಸರು ವಾಪಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದಾಳೆ, ಸಾವಿನ ಹಿಂದೆ ಯಾವುದೇ ಅನುಮಾನವಿಲ್ಲ ಎಂದು ಮೃತಳ ದೊಡ್ಡಮ್ಮ ಮುನಿರತ್ನಮ್ಮ ಸಮಜಾಯಿಷಿ ನೀಡಿದ್ದಾರೆ.

ಸರಿಯಾದ ಮಾಹಿತಿ ಇಲ್ಲದೆ ಇದ್ದಕ್ಕಿದ್ದಂತೆ ಶವ ತಂದಿದ್ದಕ್ಕೆ ಈತಮಾಕಲಹಳ್ಳಿಯ ಕೆಲವು ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಅಸಹಜ ಸಾವು ಸಂಭವಿಸಿದಾಗ ಪೊಲೀಸರಿಗೆ ತಿಳಿಸುವುದು ಕಡ್ಡಾಯ. ಈ ಪ್ರಕರಣದಲ್ಲಿ ಪೊಲೀಸರಿಗೆ ತಿಳಿಸದೆ ಶವ ಸಾಗಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ? ಸಾವಿನ ಹಿಂದೆ ಯಾರದ್ದಾದರೂ ಪ್ರಚೋದನೆ ಇದೆಯೇ? ಪೊಲೀಸ್ ತನಿಖೆಯಿಂದ ತಪ್ಪಿಸಿಕೊಳ್ಳಲು ಶವವನ್ನು ತರಾತುರಿಯಲ್ಲಿ ಸಾಗಿಸಲಾಯಿತೇ? ಎಂಬ ಅನುಮಾನಗಳು ಮೂಡಿದೆ.

ಇದನ್ನೂ ಓದಿ: ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಕಲ್ಯಾಣಿಯ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪ್ರಸ್ತುತ ಚಿಕ್ಕಬಳ್ಳಾಪುರ ಮತ್ತು ನಂದಗುಡಿ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ಕಲ್ಯಾಣಿಯ ದೊಡ್ಡಪ್ಪ ಹಾಗೂ ದೊಡ್ಡಮ್ಮ ಮುನಿರತ್ನಮ್ಮ , ತಮಗೆ ಮಕ್ಕಳಿಲ್ಲವೆಂದು, ಮುನಿರತ್ನಮ್ಮ ತಂಗಿ ನರಸಮ್ಮಳ ಎರಡನೆ ಮಗಳನ್ನು ದತ್ತು ಪಡೆದುಕೊಂಡಿದ್ದರು. ಇನ್ನು ವೈದ್ಯರ ವರದಿಯ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ನಡೆಸಲಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ