AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು

ಜುಲೈ 2ರಂದು ನಂದಿಗಿರಿಧಾಮದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಭರ್ಜರಿ ಕೊಡುಗೆ ನೀಡಲಾಗಿದೆ. 141 ಕೋಟಿ ರೂ. ವೆಚ್ಚದ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅದೇ ರೀತಿ ಬೇರೆ ಬೇರೆ ಯೋಜನೆಗಳನ್ನು ನೀಡಲಾಗಿದೆ. ಇಲ್ಲಿದೆ ಮಾಹಿತಿ.

ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು
ಸಚಿವ ಸಂಪುಟ ಸಭೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 04, 2025 | 8:42 AM

Share

ಚಿಕ್ಕಬಳ್ಳಾಪುರ, ಜುಲೈ 04: ಪ್ರೇಮಿಗಳ ಪಾಲಿನ ಪ್ರೇಮಧಾಮ, ಪ್ರವಾಸಿ ತಾಣ ನಂದಿಗಿರಿಧಾಮದಲ್ಲಿ ಜುಲೈ 2ರಂದು ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (cabinet meeting) ನಡೆದಿದೆ. ಇದೇ ಸಚಿವ ಸಂಪುಟ ಸಭೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗೆ ವರದಾನವಾಗಿದ್ದು, 141 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣ ಸೇರಿದಂತೆ ಇತರೆ ಭರಪೂರ ಯೋಜನೆಗಳು ದೊರೆತಿವೆ.

ಚಿಕ್ಕಬಳ್ಳಾಪುರಕ್ಕೆ ಸಿಕ್ಕಿದ್ದೇನು?

ಸಾಕಷ್ಟು ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆದ ರಾಜ್ಯ ಸರ್ಕಾರದ 14ನೇ ವಿಶೇಷ ಸಚಿವ ಸಂಪುಟ ಸಭೆ ಜಿಲ್ಲೆಗೆ ವರದಾನವಾಗಿದೆ. ಫಲಪುಷ್ಪಗಿರಿಧಾಮಗಳ ನಗರಿ ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಲ್ಲಿ 141 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹೀಗಾಗಿ ಜಿಲ್ಲೆಯ ಹೂ ಬೆಳಗಾರರಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರೇಮಿಗಳ ಹಾಟ್​ ಸ್ಪಾಟ್​ ನಂದಿ ಬೆಟ್ಟಕ್ಕೂ ಭರ್ಜರಿ ಕೊಡುಗೆ : ಸಂಪುಟ ಸಭೆಯ ಮುಖ್ಯಾಂಶಗಳು

ಇದನ್ನೂ ಓದಿ
Image
ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್
Image
ಐದು ವರ್ಷ ಸಿಎಂ ಎಂಬ ಸಿದ್ದು ಹೇಳಿಕೆಗೆ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ
Image
ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯರನ್ನು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್
Image
5 ವರ್ಷಗಳ ಕಾಲ ನಾನೇ ಸಿಎಂ: ಇರಲ್ಲ ಅನ್ನೋಕೆ ಅಶೋಕ್​ ಏನು ಹೈಕಮಾಂಡಾ? ಸಿಎಂ

ಈ ಮೊದಲು ಪಿ.ಪಿ. ಮಾದರಿಯಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಘೋಷಣೆ ಮಾಡಲಾಗಿತ್ತು. ಆದರೆ ಜಿಲ್ಲೆಯ ಶಾಸಕರು ಖಾಸಗಿ ಸಹಬಾಗಿತ್ವ ಬದಲು ನೇರವಾಗಿ ಸರ್ಕಾರದಿಂದಲೇ ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒತ್ತಾಯ ಮಾಡಿದರು. ಇದರಿಂದ ನಂದಿಗಿರಿಧಾಮದಲ್ಲಿ ನಡೆದ ಸಚಿವ ಸಂಪುಟದಲ್ಲಿ ಅಸ್ತು ಎನ್ನಲಾಗಿದೆ. ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸಂತಸ ವ್ಯಕ್ತಪಡಿಸಿದ್ದಾರೆ.

50 ಕೋಟಿ ರೂ ವಿಶೇಷ ಪ್ಯಾಕೆಜ್ 

ಇನ್ನೂ ನಂದಿಬೆಟ್ಟದಲ್ಲಿ ಅಭಿವೃದ್ದಿ ಕಾಮಗಾರಿಗಳಿಗಾಗಿ 50 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಲಾಗಿದೆ. ಇದಲ್ಲದೇ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ 11 ಕೋಟಿ ರೂ. ವೆಚ್ಚದಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಯಂತ್ರ ಅಳವಡಿಕೆಗೆ ಅನುಮತಿ ನೀಡಲಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಅಮರಾವತಿ ಬಳಿ ನಿರ್ಮಾಣವಾಗುತ್ತಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎರಡನೇ ಹಂತದ ಕಾಮಗಾರಿಗೆ 123 ಕೋಟಿ ರೂ. ಮಂಜೂರು ಮಾಡಲಾಗಿದೆ.

ಚಿಂತಾಮಣಿ ತಾಲೂಕು ಹಾಗೂ ಶಿಡ್ಲಘಟ್ಟ ತಾಲೂಕಿನ 119 ಕೆರೆಗಳಿಗೆ 237 ಕೋಟಿ ರೂ. ವೆಚ್ಚದಲ್ಲಿ ಎಚ್ ಎನ್ ವ್ಯಾಲಿ ಸಂಸ್ಕರಿತ ತ್ಯಾಜ್ಯ ನೀರಿನ್ನು ಹರಿಸಲು ಅನುನೋದನೆ ನೀಡಲಾಗಿದೆ. ಚಿಂತಾಮಣಿ ನಗರದ ಜನತೆಗೆ ಕುಡಿಯುವ ನೀರು ಪೂರೈಸಲು ಉದ್ದೇಶಿಸಿರುವ ಭಕ್ತರಹಳ್ಳಿ ಅರಸೀಕೆರೆ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ 36 ಕೋಟಿ ರೂ.ಗೆ ಅಸ್ತು ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಇಷ್ಟೇ ಇಲ್ಲದೆ ಬಾಗೇಪಲ್ಲಿಯಲ್ಲಿ ಗಂಟ್ಲಮಲ್ಲಮ್ಮ ಡ್ಯಾಂ ನಿರ್ಮಾಣಕ್ಕೆ 189 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಎತ್ತಿನಹೊಳೆ ಯೋಜನೆ ಸಾಧಕ ಭಾದಕಗಳು ಹಾಗೂ ಎಚ್​ಎನ್ ವ್ಯಾಲಿ ನೀರಿನ ತೃತೀಯ ಹಂತದ ಶುದ್ದೀಕರಣ ಬೇಡ ಎಂದಿರುವುದು ಜಿಲ್ಲೆಯ ನೀರಾವರಿ ಹೋರಾಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ