ಚಿಕ್ಕಬಳ್ಳಾಪುರ: ಅಂಗನವಾಡಿಗಳಲ್ಲಿ ಮೊಟ್ಟೆ ವಿತರಣೆಗೆ ವಿರೋಧ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr K Sudhakar) ಪ್ರತಿಕ್ರಿಯೆ ನೀಡಿದ್ದಾರೆ. ‘‘ಮೊಟ್ಟೆ ಸಮಗ್ರ ಪೌಷ್ಟಿಕ ಆಹಾರವೆಂದು ಸಂಶೋಧನೆಗಳು ಹೇಳಿವೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ’’ ಎಂದು ಅವರು ಹೇಳಿದ್ದಾರೆ. ಆಹಾರ ಪದ್ಧತಿ ಅವರವರ ಇಷ್ಟ ಎಂದಿರುವ ಸಚಿವರು, ‘‘ಕೆಲವರು ಹಾಲು ಮೊಸರು ತೆಗೆದುಕೊಳ್ಳುವುದಿಲ್ಲ. ಇನ್ನೂ ಕೆಲವರು ಮೊಟ್ಟೆಯನ್ನು ಮಾತ್ರ ತಿನ್ನುತ್ತಾರೆ. ಅವರವರ ಆಹಾರ ಪದ್ಧತಿ ಅವರ ಇಷ್ಟ. ಧಾರ್ಮಿಕ, ಧರ್ಮದ ನಂಬಿಕೆ ಅವರವರ ಇಷ್ಟವಾಗಿರುತ್ತದೆ’’ ಎಂದಿದ್ದಾರೆ. ಅಲ್ಲದೇ ಸರ್ಕಾರ ಯಾವುದನ್ನೂ ಬಲವಂತವಾಗಿ ಹೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಿಕ್ಷಣ ಇಲಾಖೆ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದ್ದು, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. 7 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ನೀಡಿವೆ.
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತಿಗಳಿಗೆ ಒಳ್ಳೆಯದಾಗುತ್ತದೆ: ಸಚಿವ ಸುಧಾಕರ್
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತಿಗಳಿಗೆ ಒಳ್ಳೆಯದಾಗುತ್ತದೆ ಎಂದು ಚಿಕ್ಕಬಳ್ಳಾಫುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಹೆಚ್ಚಿನ ಅನುದಾನ ಸಿಗುತ್ತದೆ. ಕೋಲಾರ ಚಿಕ್ಕಬಳ್ಳಾಫುರ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ಪಕ್ಷಾತೀತವಾಗಿ ಮತದಾರರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಲು ತಿರ್ಮಾನಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಡಾ.ವೇಣುಗೋಪಾಲ ಕೋಲಾರ- ಚಿಕ್ಕಬಳ್ಳಾಫುರ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಇದನ್ನೂ ಓದಿ:
ಧಾರವಾಡ: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಆದೇಶ ವಾಪಸ್ ಪಡೆಯದಿದ್ದಲ್ಲಿ ಹೋರಾಟಕ್ಕೆ ಮಠಾಧೀಶರ ನಿರ್ಧಾರ
ವಿಜಯಪುರ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್ಪೋಸ್ಟ್; ತಪಾಸಣೆ ನಡೆಸದೆ ಸಿಬ್ಬಂದಿ ನಿರ್ಲಕ್ಷ್ಯ