ಇಶಾ ಫೌಂಡೇಶನ್​ ವತಿಯಿಂದ ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್, ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಡೌಟ್

ಇದೇ ಜನವರಿ 15 ಯೋಗೇಶ್ವರ ಲಿಂಗ ಸ್ಥಾಪನೆಗೆ ಉದ್ದೇಶಿಸಲಾಗಿತ್ತು. ಇದೀಗ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಅನುಮಾನವಾಗಿದೆ.

ಇಶಾ ಫೌಂಡೇಶನ್​ ವತಿಯಿಂದ ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್, ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಡೌಟ್
ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 11, 2023 | 1:20 PM

ಚಿಕ್ಕಬಳ್ಳಾಪುರದಲ್ಲಿ ಇಶಾ ಫೌಂಡೇಶನ್​ ವತಿಯಿಂದ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಇಶಾ ಯೋಗ ಕೇಂದ್ರಕ್ಕೆ ಹಿನ್ನಡೆಯುಂಟಾಗಿದೆ. ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರ ಮತ್ತು ಇಶಾ ಯೋಗ ಕೇಂದ್ರ ಸೇರಿ 16 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಆದಿಯೋಗಿ ಪ್ರತಿಮೆ ಸ್ಥಾಪನೆ ಸ್ಥಳವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ಅವರು ವಾದ ಮಂಡಿಸಿದ್ದಾರೆ.

ಆದಿಯೋಗಿ ಪ್ರತಿಮೆ ಸ್ಥಾಪನೆಗಾಗಿ ಸರ್ಕಾರ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ನಂದಿ ಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದೆ ಎಂದು ವಾದ ಮಂಡಿಸಲಾಗಿದೆ. ಪರಿಸರದ ಮೇಲೆ ಪರಿಣಾಮ ಬೀರಬಹುದೆಂಬುದನ್ನು ಒಪ್ಪಬಹುದು ಎಂದು ಸರ್ಕಾರದ‌ ಅಧಿಸೂಚನೆಯನ್ನು ಪ್ರಶ್ನಿಸಲು ಅವಕಾಶ ನೀಡಿದ ಹೈಕೋರ್ಟ್, ಯಥಾಸ್ಥಿತಿಗೆ ಆದೇಶಿಸಿದೆ.

Also Read: Sadhuguru Jaggi Vasudev: ಇಶಾ ಫೌಂಡೇಷನ್ ತಮಿಳುನಾಡಿನಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗುತ್ತಾ? ಸ್ಥಳ ಮಹತ್ವ ಏನು?

ಇದೇ ಜನವರಿ 15 ಯೋಗೇಶ್ವರ ಲಿಂಗ ಸ್ಥಾಪನೆಗೆ ಉದ್ದೇಶಿಸಲಾಗಿತ್ತು. ಇದೀಗ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಅನುಮಾನವಾಗಿದೆ.

ಜನವರಿ 15 ರಂದು ಆದಿಯೋಗಿ ಮೂರ್ತಿ ಉದ್ಘಾಟನೆ:

ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಈ ಹಿಂದೆ ಹೇಳಿದ್ದಂತೆ ಆಶ್ರಮದ ನಿರ್ಮಾಣ ಕಾಮಗಾರಿ ಮುಂದುವರೆದಿದ್ದು ಆಶ್ರಮದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ. ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ|| ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

Published On - 1:15 pm, Wed, 11 January 23

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​