ಬಿಸಿಲಿಗೆ ಹೆದರಿ ಮನೆಯಲ್ಲೇ ರಜೆಯ ಮಜಾ; ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ ಪ್ರವಾಸಿ ತಾಣಗಳು
ರಜೆಯನ್ನು ಮಜವಾಗಿ ಕಳೆಯೋಣವೆಂದು ವಿದ್ಯಾರ್ಥಿಗಳು ಅಂದುಕೊಂಡಿದ್ದರು. ಆದರೆ, ಅತಿಯಾದ ಬಿಸಿಲು ಹಾಗೂ ತಾಪಮಾನದಿಂದ ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರೆಗೆ ಬಿಡುತ್ತಿಲ್ಲ. ಇದರಿಂದ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಸೇರಿದಂತೆ ಹಲವು ಪ್ರವಾಸಿ ತಾಣಗಳು(tourist place), ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ.
ಚಿಕ್ಕಬಳ್ಳಾಪುರ, ಮೇ.03: ಈಗ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ. ರಜೆಯನ್ನು ಮಜವಾಗಿ ಕಳೆಯೋಣವೆಂದು ವಿದ್ಯಾರ್ಥಿಗಳು ಅಂದುಕೊಂಡಿದ್ದರು. ಆದರೆ, ಅತಿಯಾದ ಬಿಸಿಲು ಹಾಗೂ ತಾಪಮಾನದಿಂದ ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರೆಗೆ ಬಿಡುತ್ತಿಲ್ಲ. ಇದರಿಂದ ಪ್ರವಾಸಿ ತಾಣಗಳು(tourist place), ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ. ಹೌದು, ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ. ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿದೆ. ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನಲ್ಲಿದ್ದರೂ ಬೆಂಗಳೂರಿಗರ ಜೊತೆ ಅವಿನಾಭಾವ ನಂಟು ಹೊಂದಿದೆ.
ಇನ್ನು ಬೇಸಿಗೆಯ ರಜೆ ಬಂದರೆ ಸಾಕು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅವರ ಪೋಷಕರು ನಂದಿ ಗಿರಿಧಾಮಕ್ಕೆ ದಾಂಗುಡಿ ಇಡುತ್ತಿದ್ದರು. ಆದರೆ, ಈ ಬಾರಿ ಅತಿಯಾದ ಬಿಸಿಲು, ಉಷ್ಣವಿರುವ ಕಾರಣ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಮತ್ತು ಪ್ರವಾಸಿಗರು ಗಿರಿಧಾಮದತ್ತ ಮುಖ ಮಾಡಿಲ್ಲ. ಇದರಿಂದ ಗಿರಿಧಾಮ ಬಿಕೋ ಎನ್ನುತ್ತಿದೆ.
ಇದನ್ನೂ ಓದಿ:Summer Tour: ಬೇಸಿಗೆ ರಜೆಗಾಗಿ ಈ ಪ್ರವಾಸಿ ತಾಣಗಳು ಸೂಕ್ತ: ಪ್ರಕೃತಿಯ ಸೌಂದರ್ಯಕ್ಕೆ ಮಾರು ಹೋಗುವುದು ಪಕ್ಕಾ
ಇದು ಪ್ರವಾಸದ ಮೂಡಲ್ಲಿರುವವರ ಕಥೆಯಾದರೆ, ಇನ್ನು ಕಛೇರಿಗಳಿಗೆ ಹೋಗುವವರ ವ್ಯಥೆ ಹೇಳತೀರದು. ಕಛೇರಿಗೆ ಬಂದು ಕುಳಿತರೆ ಸಾಕು, ಬಿಸಿ ಗಾಳಿ, ಶಕೆಯದ್ದೆ ಹವಾ. ಇನ್ನು ಪ್ಯಾನ್ ಆನ್ ಮಾಡಿದರೆ ಬಿಸಿಗಾಳಿ ಮುಖಕ್ಕೆ ಹೊಡೆಯುತ್ತದೆ. ಈ ಹಿನ್ನಲೆ ಯಾವಾಗ ಬೇಸಿಗೆ ಕಳೆಯುತ್ತೆ ಎಂದು ನೌಕರರು ಹೇಳುತ್ತಿದ್ದಾರೆ. ಮತ್ತೊಂದಡೆ ಚಿಕ್ಕಬಳ್ಳಾಪುರದಲ್ಲಿ ಕಂಡು ಕೇಳರಿಯದ 40 ಡಿಗ್ರಿ ಸೆಲ್ಸಿಯಸ್ ಉಷ್ಣ ದಾಖಲಾಗಿದೆ. ಇದರಿಂದ ಜನರು ಮನೆಯಿಂದ ಆಚೆ ಬರುತ್ತಿಲ್ಲ. ನಗರದ ರಸ್ತೆಗಳು, ಜನರು ಹಾಗೂ ವಾಹನಗಳಿಲ್ಲದೆ ಬಿಕೋ ಎನ್ನುತ್ತಿವೆ. ಯಾವಾಗ ಬೇಸಿಗೆ ಮರೆಯಾಗುತ್ತೆಂದು ಕಾಯುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:37 pm, Fri, 3 May 24