Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ: ಇಲ್ಲಿದೆ ಕಾರ್ಯಕ್ರಮದ ವಿವರ

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಎನ್.ಡಿ.ಎ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಏ.20) ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನಲೆ ಕಾರ್ಯಕ್ರಮದ ಪ್ರಯುಕ್ತ ಚಿಕ್ಕಬಳ್ಳಾಪುರದ ಬಳಿ ಸುಮಾರು 50 ಎಕರೆ ಜಮೀನಿನಲ್ಲಿ ವಿಶಾಲವಾದ ಶಾಮಿಯಾನ ಹಾಗೂ ಹೆಲಿಪ್ಯಾಡ್‍ಗಳ ನಿರ್ಮಾಣ ಮಾಡಲಾಗಿದೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ: ಇಲ್ಲಿದೆ ಕಾರ್ಯಕ್ರಮದ ವಿವರ
ನರೇಂದ್ರ ಮೋದಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on:Apr 20, 2024 | 6:58 AM

ಚಿಕ್ಕಬಳ್ಳಾಪುರ, ಏ.19: ಚಿಕ್ಕಬಳ್ಳಾಪುರ(Chikballapura) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶಬಾಬುರವರ ಪರ ಚುನಾವಣಾ ಪ್ರಚಾರ ನಡೆಸಲು ಇಂದು (ಏ.20) ಮಧ್ಯಾಹ್ನ 3.30 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಚಿಕ್ಕಬಳ್ಳಾಪುರ ಆಗಮಿಸಲಿದ್ದಾರೆ. ಮೋದಿಯವರ ಕಾರ್ಯಕ್ರಮದ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 50 ಎಕರೆ ಜಮೀನಿನಲ್ಲಿ ವಿಶಾಲವಾದ ಪೆಂಡಲ್ ಹಾಗೂ ಹೆಲಿಪ್ಯಾಡ್‍ಗಳ ನಿರ್ಮಾಣ ಮಾಡಲಾಗಿದೆ.

50 ಸಾವಿರ ಆಸನಗಳ ವ್ಯವಸ್ಥೆ

ಇನ್ನು ಆರ್​ಆರ್​ಆರ್​ ಚಲನಚಿತ್ರದ ಟ್ರೈಲರ್​ ರಿಲೀಸ್ ಮಾಡಿದ್ದ ಸ್ಥಳದಲ್ಲೇ ಮೋದಿಯವರ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಸುಮಾರು 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, 30ಕ್ಕೂ ಹೆಚ್ಚು ಶೌಚಾಲಯ, ಬೃಹತ್ ಎಲ್‍ಇಡಿ ಪರದೆಗಳು, ಪೆಂಡಲ್, ಪಾರ್ಕಿಂಗ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:Lok Sabha Elections 2024: ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ, ಪ್ರತಿ ಧ್ವನಿಯೂ ಮುಖ್ಯ: ನರೇಂದ್ರ ಮೋದಿ

450 ಪೊಲೀಸರಿಂದ ಬಂದೋಬಸ್ತ್

ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಕೇಂದ್ರವಲಯ ಐಜಿಪಿಯವರ ನೇತೃತ್ವದಲ್ಲಿ ಎಸ್‍ಪಿ, ಎಎಸ್‍ಪಿ ಸೇರಿದಂತೆ ಭದ್ರತೆಗಾಗಿ 450 ಪೊಲೀಸರಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮೋದಿ ವೇಳಾಪಟ್ಟಿ

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ವೇದಿಕೆಯ ಹಿಂಭಾಗ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‍ನಲ್ಲಿ ಲ್ಯಾಂಡ್ ಆಗಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿನ ಅರಮನೆ ಮೈದಾನಕ್ಕೆ ತೆರಳಲಿದ್ದಾರೆ. ಇನ್ನು ಮೋದಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಬಿ.ಎಸ್.ವೈ, ಬಿ.ವೈ ವಿಜೇಯಂದ್ರ ಹಾಗೂ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Fri, 19 April 24

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್