ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು; ಕಚೇರಿ ಎದುರು ಧರಣಿ, ಯಾಕೆ ಗೊತ್ತಾ?

ಇಲಾಖಾ ವಿಚಾರಣೆ ನೆಪದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಲವು ತಿಂಗಳುಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು; ಕಚೇರಿ ಎದುರು ಧರಣಿ, ಯಾಕೆ ಗೊತ್ತಾ?
ಚಿಕ್ಕಬಳ್ಳಾಪುರ ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 7:52 PM

ಚಿಕ್ಕಬಳ್ಳಾಪುರ, ಮೇ.11: ಎಸ್ಪಿ ಕಛೇರಿ ಎದುರು ಇಂದು(ಮೇ.11) ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಚೇಳೂರು ಪೊಲೀಸ್ ಠಾಣೆಯ ಸಿಬ್ಬಂದಿ  ಅಶೋಕ್ ಹಾಗೂ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಸಿಬ್ಬಂದಿ ನರಸಿಂಹಮೂರ್ತಿ ಎಂಬುವವರು ಇದೀಗ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್ ನಾಗೇಶ್ ವಿರುದ್ದವೇ ತಿರುಗಿಬಿದ್ದಿದ್ದಾರೆ. ಎಸ್ಪಿ ಡಿ.ಎಲ್ ನಾಗೇಶ್ ತಾರತಮ್ಯ ನೀತಿ ಅನುಸರಿಸುತ್ತಿದ್ದು, ತಮ್ಮ ಮೇಲೆ ಇಲಾಖೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇಬ್ಬರನ್ನು ಎರಡೆರಡು ಭಾರಿ ಅಮಾನತು ಮಾಡಿ ಇಲಾಖೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವಲತ್ತುಕೊಂಡಿದ್ದಾರೆ.
ಕಳೆದ ವರ್ಷದ ಹಿಂದೆ ಮನಿ ಡಬ್ಲಿಂಗ್ ಪ್ರಕರಣದಲ್ಲಿ ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ರವಿಕುಮಾರ್ ಸೇರಿ ಹಲವರ ಮೇಲೆ ಪ್ರಕರಣ ದಾಖಲಾಗಿ ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನ ಬಚಾವ್ ಮಾಡಲು ಪೇದೆಗಳಾದ ನರಸಿಂಹಮೂರ್ತಿ ಹಾಗೂ ಅಶೋಕ್ ಅವರನ್ನು ವಿನಾಕಾರಣವಾಗಿ ಸಿಲುಕಿಸಿದ್ದಾರಂತೆ. ಇದನ್ನ ಪ್ರಶ್ನಿಸಿದ್ದಕ್ಕೆ ಟ್ರಾನ್ಸ್ ಫರ್ ಶಿಕ್ಷೆ ನೀಡುವುದರ ಜೊತೆಗೆ ಮೇಲ್ಮಟ್ಟದ ಅಧಿಕಾರಿಗಳಿಂದ ಟಾರ್ಚರ್ ನೀಡುತ್ತಿದ್ದಾರಂತೆ. ಇದರಿಂದ ರೋಸಿಹೋದ ಪೇದೆಗಳಾದ ಅಶೋಕ್ ಹಾಗೂ ನರಸಿಂಹಮೂರ್ತಿ ತಮ್ಮ ಪತ್ನಿ,ಮಕ್ಕಳನ್ನ ಕರೆದುಕೊಂಡು ಬಂದು ಚಿಕ್ಕಬಳ್ಳಾಪುರ ನಗರ ಹೊರವಲಯದ ಅಣಕನೂರು ಬಳಿಯ ಜಿಲ್ಲಾ ಎಸ್ಪಿ ಕಚೇರಿ ಎದುರು ಧರಣಿ ಕುಳಿತು, ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಇನ್ನು ಮಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ಬಂಧಿಸಿ ಹಣ ವಸೂಲಿ ಮಾಡಿ ನಕಲಿ ರೈಡ್ ಮಾಡಿದ ಪ್ರಕರಣದಲ್ಲಿ ಇಬ್ಬರು ಸಿಬ್ಬಂಧಿಗಳು ಹಾಗೂ ಇನ್ಸ್ಪೆಕ್ಟರ್ ರವಿಕುಮಾರ್ ಅಮಾನತು ಆಗಿದ್ದು, ಹಾಗೆ ಇಲಾಖೆ ಇಲಾಖೆ ವಿಚಾರಣೆ ಎದುರಿಸುತ್ತಿದ್ದಾರೆ. ಇದೆ ವಿಚಾರದಲ್ಲಿ ಈಗ ಕಿರುಕುಳ ಎಂದು ಆರೋಪ ಬಂದಿದೆ. ಇದ್ರಿಂದ ಎಸ್ಪಿ ಖಾಸೀಮ್ ರವರು ಧರಣಿ ನಿರತ ಇಬ್ಬರು ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ್ದು, ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಸಮಾಧಾನ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ