ಡಾ ಕೆ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಲೋಕಸಭಾ ಚುನಾವಣಾ ಕಾವು ಹೆಚ್ಚುತ್ತಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇಂದು (ಏ.18) ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಿದರು. ಈ ವೇಳೆ​ ಮಾಜಿ ಸಚಿವ ಡಾ.ಸುಧಾಕರ್ ವಿರುದ್ದ ವಾಗ್ದಾಳಿ ನಡೆಸಿದರು.

ಡಾ ಕೆ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಸಿದ್ದರಾಮಯ್ಯ
Edited By:

Updated on: Apr 18, 2024 | 2:49 PM

ಚಿಕ್ಕಬಳ್ಳಾಪುರ, ಏ.18: ಮಾಜಿ ಸಚಿವ ಡಾ. ಕೆ ಸುಧಾಕರ್(Dr. K Sudhakar )ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾತನಾಡಿ, ‘ಸುಧಾಕರ್ ಆರೋಗ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಭ್ರಷ್ಟರು ಸಂಸತ್​ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ. ಅವರ ಕುರಿತ ಹಗರಣದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್​ ನೂರಕ್ಕೆ ನೂರಷ್ಟು ಜೈಲಿಗೆ ಹೋಗುತ್ತಾರೆ ಎಂದು ಕಿಡಿಕಾರಿದರು.

ಬಿಜೆಪಿಯಲ್ಲಿ ಮಂತ್ರಿಯಾಗಿ ಹಣ ಲೂಟಿ ಹೊಡೆದಿದ್ದಾನೆ ಎಂದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದೀರಿ. ರಾಜಕೀಯ ಲಾಭಿ ನಡೆಸಿ ಈ ಭಾರಿ ಎನ್.ಡಿ.ಎ ಟಿಕೆಟ್ ಪಡೆದಿದ್ದಾನೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ನರೇಂದ್ರ ಮೋದಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಕೊಟ್ಟ ಭರವಸೆಗಳನ್ನು ಈಡೆರಿಸಿಲ್ಲ. ದೇಶದ ಜನರ ಭರವಸೆ ಹುಸಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಮೋದಿ ಅಚ್ಚೇ ದಿನ್ ಆಯೇಗಾ ಎಂದಿದ್ದರು, ಇದುವರೆಗೂ ಒಳ್ಳೆದಿನ ಬರಲಿಲ್ಲ.

ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ಘೋಷಣೆ ಮಾಡಿದ್ದೇವು. ಅದರಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ಈ ಭಾರಿಯ ಲೋಕಸಭೆ ಚುನಾವಣೆಯಲ್ಲೂ ನೀವು ಸುಧಾಕರ್​ನನ್ನು ಸೋಲಿಸಿ, ರಕ್ಷಾ ರಾಮಯ್ಯ ಕುಟುಂಬ ಪ್ರಾಮಾಣಿಕರು ರಕ್ಷಾ ರಾಮಯ್ಯಗೆ ಮತ ಹಾಕಿ ಎಂದು ಕರೆ ನೀಡಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಪ್ರವೇಶಿಸುವ ಮೊದಲು ಚುನಾವಣಾಧಿಕಾರಿಗಳಿಂದ ತಪಾಸಣೆಗೊಳಗಾದ ಸಿದ್ದರಾಮಯ್ಯ ವಿಶೇಷ ವಾಹನ

ಇನ್ನು ನಗರದ ಎಂ.ಜಿ ರಸ್ತೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಜೊತೆ ರೋಡ್ ಶೋ ನಡೆಸಿದ ಸಿಎಂ, ರಕ್ಷಾ ರಾಮಯ್ಯ ಪರ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಸಿಎಂ ಗೆ  ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ, ಕೃಷ್ಣಬೈರೇಗೌಡ, ಮಾಜಿ ಶಾಸಕರಾದ ವಿ.ಮುನಿಯಪ್ಪ ಹಾಗೂ ಸ್ಥಳಿಯ ಶಾಸಕ ಪ್ರದೀಪ್ ಈಶ್ವರ್ ಸಾಥ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ