ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ಗೆ ಟಿಕೆಟ್ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು, ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು.
ಚಿಕ್ಕಬಳ್ಳಾಪುರ, ಮಾ.31: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ಗೆ ಟಿಕೆಟ್ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್ ಸೇರಿದರು. ಇನ್ನು ಏಪ್ರಿಲ್ 2 (ಮಂಗಳವಾರ)ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿ ಜಯಶಾಲಿಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹಾಗೂ ಹೆಚ್ಡಿ ದೇವೇಗೌಡರ ಆಪ್ತ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಯೋಚಿಸಿತ್ತು.
ಇದನ್ನೂ ಓದಿ:ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಅದರಂತೆ ಸಚಿವ ಎಂ.ಸಿ.ಸುಧಾಕರ್ ಸೇರಿದಂತೆ ಹಲವು ನಾಯಕರು ಕೆ.ಪಿ ಬಚ್ಚೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಬಳಿಕ ಮಾತನಾಡಿದ್ದ ಬಚ್ಚೆಗೌಡ, ‘ಜೆಡಿಎಸ್ ನಾಯಕರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲ್ಲ, ನಮ್ಮ ರಾಜಕೀಯ ಎದುರಾಳಿ ಡಾ. ಕೆ ಸುಧಾಕರ್ ಪರ ನಾನು ನಿಲ್ಲಲ್ಲ. ಹೀಗಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಕೆ.ಪಿ ಬಚ್ಚೇಗೌಡ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:38 pm, Sun, 31 March 24