ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ: ಬಿಎಂಟಿಸಿ ಬಸ್ ಸಂಚಾರಕ್ಕೆ ಅಸ್ತು ಎಂದ ಕೆಎಸ್ಆರ್ಟಿಸಿ
ಸಾಕಷ್ಟು ಹಗ್ಗ ಜಗ್ಗಾಟದ ನಂತರ, ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದೆ. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ಆರ್ಟಿಸಿ ಒಪ್ಪಿಗೆ ಸೂಚಿಸಿದೆ.
ಚಿಕ್ಕಬಳ್ಳಾಪುರ: ಸಾಕಷ್ಟು ಹಗ್ಗ ಜಗ್ಗಾಟದ ನಂತರ ಮತ್ತು ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದೆ. ಚಿಕ್ಕಬಳ್ಳಾಪುರಕ್ಕೆ (Chikkaballapur) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ಎಸಿ ಬಸ್ ಸಂಚಾರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (K Sudhakar) “ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ” ಎಂದು ಟ್ವೀಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಬಸ್ ಬಿಡಲು ಬಿಎಂಟಿಸಿ ಒಪ್ಪಿಗೆ ಸೂಚಿಸಿದ ಬೆನ್ನೆಲ್ಲೇ ಕೆಎಸ್ಆರ್ಟಿಸಿ ಬಸ್ ಬಿಡದಂತೆ ಆಕ್ಷೇಪ ವ್ಯಕ್ತಪಡಿಸಿತ್ತು.
ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಬಿಡಲು ಕೆಎಸ್ಆರ್ಟಿಸಿ ಆಕ್ಷೇಪ ಏಕೆ
ಬಿಎಂಟಿಸಿ ಬಸ್ ಸೇವೆ ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಿದ್ದೇ ತಡ, ಕೆಎಸ್ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್ಆರ್ಟಿಸಿ ಅಧಿಕಾರಿಗಳು BMTC ನಡೆ ಖಂಡಿಸಿದ್ದರು. ಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ KSRTCಗೆ ಆದಾಯಕ್ಕೆ ಹೊಡೆತ ಬೀಳುವ ಭೀತಿ ಕೆಎಸ್ಆರ್ಟಿಸಿಗೆ ಎದುರಾಗಿತ್ತು.
ಇದನ್ನೂ ಓದಿ: ಬೆಂಗಳೂರಲ್ಲಿ ಸಂಚರಿಸುತ್ತಿವೆ ಎಮ್ಡಿ 15 ಹೆಸರಿನ ಬಿಎಂಟಿಸಿಯ 20 ಬಸ್ಗಳು
ನಿಯಮದಂತೆ ಬಿಬಿಎಂಪಿ ವ್ಯಾಪ್ತಿಯ 25 ಕಿಮೀ ಮಾತ್ರ ಬಿಎಂಟಿಸಿ ಬಸ್ ಓಡಿಸಲು ಅವಕಾಶ ಇದೆ. ಆದರೆ ಈಗ ಬೆಂಗಳೂರು ಹೊರವಲಯದ ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆ ಮಾಡಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿಮೀ ಮೀಟರ್ ಅಂತರವಿದೆ. ನಿಯಮದ ಪ್ರಕಾರ ಬಸ್ ಸಂಚಾರ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಹೇಳಿದ್ದರು.
ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು. ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್ನ್ಯೂಸ್ ನೀಡಿದೆ.
ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ.
1/3 pic.twitter.com/r17zSAYwhP
— Dr Sudhakar K (@mla_sudhakar) March 16, 2023
ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ ಎಂದ ಸುಧಾಕರ್
ಕೆಎಸ್ಆರ್ಟಿಸಿ ಒಪ್ಪಿಗೆ ಸೂಚಿಸಿದ ನಂತರ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ “ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ ! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ. ಇದರಿಂದ ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ. ಚಿಕ್ಕಬಳ್ಳಾಪುರದ ಜನತೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಗೂ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆಗಳು. ಈ ಬೇಡಿಕೆಯನ್ನು ಸಾಕಾರಗೊಳಿಸಲು ಶ್ರಮಿಸಿದ ಬಿಎಂಟಿಸಿ ಉಪಾಧ್ಯಕ್ಷರಾದ ನವೀನ್ ಕಿರಣ್ ಅವರಿಗೆ ಅಭಿನಂದನೆಗಳು”. ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:49 am, Fri, 17 March 23